Advertisement

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

04:49 PM Jul 07, 2024 | Team Udayavani |

ಪಣಜಿ: ಗೋವಾ ರಾಜ್ಯಾದ್ಯಂತ ಭಾನುವಾರ ಸುರಿದ ಭಾರೀ ಮಳೆಗೆ ಗೋವಾ ರಾಜಧಾನಿ ಪಣಜಿಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದೆ. ಪಣಜಿಯ ಪಾಟೊ ರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸವಾರರಲ್ಲಿ ಆತಂಕ ಪರಿಸ್ಥಿತಿ ನಿರ್ಮಾಣವಾಗಿದೆ.

Advertisement

ಪಣಜಿಯಲ್ಲಿ ಹಲವೆಡೆ ರಸ್ತೆಗಳಲ್ಲಿ ಮೊಣಕಾಲು ವರೆಗೆ ನೀರು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಪಾಟೊ ಪ್ರದೇಶವು ಮಹಾನಗರದ ಇತರ ಭಾಗಗಳಿಗಿಂತಲೂ ಹೆಚ್ಚು ಸುಸಜ್ಜಿತ ಕಟ್ಟಡಗಳನ್ನು ಒಳಗೊಂಡಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಪಾಟೊ ಪರಿಸರದಲ್ಲಿ ನೀರು ಸಂಗ್ರಹವಾಗುತ್ತದೆ. ಸದ್ಯ ಪಣಜಿಯಲ್ಲಿ ಸ್ಮಾರ್ಟ ಸಿಟಿ ಕಾಮಗಾರಿ ನಡೆಯುತ್ತಿದ್ದರೂ ಸದ್ಯದ ಪ್ರವಾಹ ಸ್ಥಿತಿಯನ್ನು ತಡೆಯಲು ಸಾಧ್ಯವಾಗಿಲ್ಲ.

ಪಣಜಿ ಮುನ್ಸಿಪಲ್ ಕಾರ್ಪೋರೇಶನ್ ಪಾಟೊ ಪಣಜಿ ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಪೇ ಪಾರ್ಕಿಂಗ್ ಶುಲ್ಕವನ್ನು ವಿಧಿಸುತ್ತದೆ. ಆದರೆ ಇಲ್ಲಿ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಡಿಲ್ಲ ಎಂಬುದು ಸ್ಥಳೀಯರ ಆಕ್ಷೇಪವಾಗಿದೆ. ಈ ಭಾಗದಲ್ಲಿ ಜಮಾವಣೆಯಾಗಿರುವ ಕೆಸರು ಮಿಶ್ರಿತ ನೀರಿನಿಂದ ರೋಗ ಹರಡುವ ಭೀತಿ ಎದುರಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next