Advertisement

Panaji: ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಆರೋಪಿ ಬಂಧನ

05:50 PM Oct 03, 2024 | Team Udayavani |

ಪಣಜಿ: ಕರ್ನಾಟಕದ ಬೆಳಗಾವಿಯಿಂದ ಅಕ್ರಮವಾಗಿ ಗೋವಾಕ್ಕೆ ಕಾರಿನಲ್ಲಿ ತರಲಾಗುತ್ತಿದ್ದ ಗೋಮಾಂಸವನ್ನು ಪೋಲಿಸರು ಜಪ್ತಿ ಮಾಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

Advertisement

ಅಕ್ಟೋಬರ್ 2 ಗಾಂಧಿ ಜಯಂತಿಯಂದು ಕರ್ನಾಟಕದ ಬೆಳಗಾವಿಯಿಂದ ಗೋವಾಕ್ಕೆ ಬಂದ ಸ್ವಿಫ್ಟ್ ಡಿಸೈರ್ ಕಾರಿನಿಂದ 120 ಕೆಜಿ ಗೋಮಾಂಸ ಜಪ್ತಿ ಮಾಡಿರುವ ಘಟನೆ ನಡೆದಿದೆ.

ಈ ಕುರಿತಂತೆ ಲಭ್ಯವಾಗಿರುವ ಮಾಹಿತಿಯ ಅನುಸಾರ ಗೋವಾದ ಕೇರಿ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸುವ ಸಂದರ್ಭದಲ್ಲಿ ಸ್ವಿಫ್ಟ್ ಕಾರ್ ನ ಡಿಕ್ಕಿಯಲ್ಲಿ ಗೋಮಾಂಸ ಪತ್ತೆಯಾಗಿದೆ. ಇದಕ್ಕೆ ಯಾವುದೇ ರೀತಿಯ ಪರವಾನಗಿಯಾಗಲೀ ಅಥವಾ ಕಾಗದಪತ್ರಗಳಾಗಲೀ ಇಲ್ಲದ ಕಾರಣ ಪೋಲಿಸರು ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಇರ್ಫಾನ್ ಸೈಯ್ಯದ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಈ ಗೋಮಾಂಸದ ಮೌಲ್ಯ 13000 ರೂ ಎಂದು ಅಂದಾಜಿಸಲಾಗಿದೆ. ಪೊಲೀಸರು ಬಂಧಿತ ಆರೋಪಿ ಇರ್ಫಾನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಳಪೈ ಪೋಲಿಸ್ ನಿರೀಕ್ಷಕ ವಿದೇಶ್ ಶಿರೋ‌ಡ್ಕರ್ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕ ಪ್ರಥಮೇಶ ನಾಯ್ಕ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next