ಪಣಜಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್ ವರೆಗೆ) ರಾಜ್ಯದಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದಾದ್ಯಂತ ಶೇ.106ರಷ್ಟು ಮುಂಗಾರು ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ ಮತ್ತು ಸೆಪ್ಟೆಂಬರ್ ನಡುವೆ ಶೇಕಡಾ 5 ರಷ್ಟು ವ್ಯತ್ಯಾಸವಿರಬಹುದು. ಮೆ 31ರಂದು ಮುಂಗಾರು ಕೇರಳ ಪ್ರವೇಶಿಸುವ ನಿರೀಕ್ಷೆ ಇದೆ ಜೂ. 4 ಅಥವಾ 5 ರಂದು ಗೋವಾ ರಾಜ್ಯಕ್ಕೆ ಮುಂಗಾರು ಆಗಮಿಸಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
2023 ರ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ 3414.3 ಮಿಮೀ ಮಳೆ ದಾಖಲಾಗಿತ್ತು 2022 ರಲ್ಲಿ, 2,720 ಮಿಲಿಮೀಟರ್ ಮಳೆ ದಾಖಲಾಗಿದೆ. ಸರಾಸರಿಗಿಂತ 10 ಶೇಕಡಾ ಕಡಿಮೆ. 2021ರಲ್ಲಿ 3156 ಮಿ.ಮೀ ಹಾಗೂ 2020ರಲ್ಲಿ 4203 ಮಿ.ಮೀ ಮಳೆ ದಾಖಲಾಗಿತ್ತು. ಆದರೆ ಪ್ರಸಕ್ತ ಜೂನ್‍ನಲ್ಲಿ ರಾಜ್ಯದಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರುವ ನಿರೀಕ್ಷೆಯಿದೆ.
ಮೇ 28 ರಿಂದ ಜೂನ್ 3 ರ ನಡುವೆ ಗೋವಾ ರಾಜ್ಯದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ ಪಣಜಿಯಲ್ಲಿ ಗರಿಷ್ಠ 33.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ಏಳು ದಿನಗಳಲ್ಲಿ ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್‍ಗೆ ತಲುಪುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.