ಪಣಜಿ: ಮಹದಾಯಿ ಪ್ರವಾಹ ಪ್ರಾಧಿಕಾರದ ಸ್ಥಾಪನೆ ಮಾಡಲಾಗಿರುವುದರಿಂದ ಈ ಕುರಿತ ಎಲ್ಲ ಅಧಿಕಾರ ಈ ಪ್ರಾಧಿಕಾರಕ್ಕೆ ಲಭಿಸಬೇಕು. ಕರ್ನಾಟಕ ಮಹದಾಯಿ ಯೋಜನೆಯನ್ನು ಮುಂದುವರಿಸಲು ಕೇಂದ್ರ ಸರ್ಕಾರವು ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷಗಳ ನಂತರ ಜು.10 ರ ಸೋಮವಾರ ಸುಪ್ರೀಂ ಕೋರ್ಟ್‍ನಲ್ಲಿ ಮಹದಾಯಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಗೋವಾ ಸರ್ಕಾರ ನೇಮಿಸಿರುವ ಇತರ ವಕೀಲರು ಈಗಾಗಲೇ ದೆಹಲಿ ತಲುಪಿದ್ದಾರೆ. ನಮ್ಮ ವಕೀಲರು ನ್ಯಾಯಾಲಯದಲ್ಲಿ ಗೋವಾದ ಪರ ವಾದ ಮಂಡಿಸಲಿದ್ದಾರೆ ಎಂದರು.
ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರ ಸ್ಥಾಪಿಸಿರುವ ಮಹದಾಯಿ ಪ್ರವಾಹ ಪ್ರಾಧಿಕಾರದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಕರ್ನಾಟಕದ ಯಾವುದೇ ಹಕ್ಕುಗಳು ಮತ್ತು ಈ ನಿಟ್ಟಿನಲ್ಲಿ ಟೆಂಡರ್ ಗಳ ಘೋಷಣೆಯು ನದಿ ನೀರು ತಿರುಗಿಸುವುದರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕೇಂದ್ರವು ಈ ವರ್ಷದ ಮೇ ತಿಂಗಳಲ್ಲಿ ಮಹದಾಯಿ-ಹರಿವು ಪ್ರಾಧಿಕಾರಕ್ಕೆ ತಿಳಿಸಿದೆ ಎಂದು ಹೇಳಿದರು.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಜಲ ಆಯೋಗ ಪರಿಷ್ಕೃತ ವಿಸ್ತೃತ ಯೋಜನೆಗೆ (ಡಿಪಿಆರ್) ಅನುಮೋದನೆ ನೀಡಿದ ಬಳಿಕ ಗೋವಾ ರಾಜ್ಯದಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಈ ಬೆನ್ನಲ್ಲೇ ರಾಜ್ಯ ಸರಕಾರವು ಕೇಂದ್ರ ಸರಕಾರದಿಂದ ಮಹದಾಯಿ ಪ್ರಾಧಿಕಾರವನ್ನು ಸ್ಥಾಪಿಸಲು ಕೋರಿತ್ತು. ಕೇಂದ್ರ ಸರ್ಕಾರವು ಪ್ರಾಧಿಕಾರವನ್ನು ನೇಮಿಸಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರಕ್ಕೆ ಎಲ್ಲ ಅಧಿಕಾರ ನೀಡಬೇಕು ಎಂದು ಗೋವಾ ಸರ್ಕಾರ ಆಗ್ರಹಿಸಿದೆ.
ಮಹದಾಯಿ ಜಲ ವಿವಾದ ನ್ಯಾಯಾಧೀಕರಣದ ತೀರ್ಪಿನ ವಿಚಾರಣೆ ಇಂದು ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದೆ. ಈ ಪ್ರಕರಣಗಳು ಜಲ ನ್ಯಾಯ ಮಂಡಳಿಯ ಆದೇಶ ಮತ್ತು ಕಳಸಾ-ಭಂಡೂರ ಯೋಜನೆಯಿಂದ ಮಹದಾಯಿ ನದಿ ತಿರುವಿಗೆ ಸಂಬಂಧಿಸಿದೆ. ಕರ್ನಾಟಕದ ವಿರುದ್ಧ ಗೋವಾ ವಿರುದ್ಧ ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಾಳೆ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.