ಪಣಜಿ: 60 ವರ್ಷದ ಮಹಿಳೆ ಮನೆಯಿಂದ ನಾಪತ್ತೆಯಾಗಿದ್ದಾಳೆ ಎಂದು ಸಂಬಂಧಿಕರು ದೂರು ನೀಡಿದ್ದು, ಬುಧವಾರ ಆಕೆಯ ಹುಡುಕಾಟ ನಡೆಸುತ್ತಿರುವಾಗ ಗೋವಾದ ಸಾವರ್ಡೆಯ ಗಣಿ ಬಳಿ ಆಕೆಯ ಚಪ್ಪಲಿಗಳು ಪತ್ತೆಯಾಗಿವೆ. ಮಹಿಳೆ ಗಣಿಯಲ್ಲಿ ಸಂಗ್ರಹವಾಗಿರುವ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೃತ ಮಹಿಳೆಯನ್ನು ಅಮಿತಾ ಗಾಂವ್ಕರ್ ಎಂದು ಗುರುತಿಸಲಾಗಿದೆ. ಸ್ಥಳೀಯರ ಪ್ರಕಾರ ಮಹಿಳೆ ಒಂಟಿಯಾಗಿ ವಾಸಿಸುತ್ತಿದ್ದು, ಕಳೆದ ದಿನದಿಂದ ನಾಪತ್ತೆಯಾಗಿದ್ದರು.
ಆಕೆ ನಾಪತ್ತೆಯಾಗಿರುವ ಬಗ್ಗೆ ಸೋದರಳಿಯ ಪೊಲೀಸರಿಗೆ ದೂರು ನೀಡಿದ್ದಾನೆ. ಬುಧವಾರ ಬೆಳಗ್ಗೆ ಮಹಿಳೆಗಾಗಿ ಹುಡುಕಾಟ ಆರಂಭಿಸಿದ್ದು, ಸಾವರ್ಡೆಯ ಗಣಿಯ ಬಳಿ ಆಕೆಯ ಚಪ್ಪಲಿ ಪತ್ತೆಯಾಗಿದೆ. ಗಣಿಯಲ್ಲಿ ಜಮಾವಣೆಯಾಗಿರುವ ನೀರಿಗೆ ಹಾರಿ ಸಾವನ್ನಪ್ಪಿದ್ದಾಳೆ.
ಘಟನೆ ಕುರಿತು ಪೊಲೀಸರು ಹಾಗೂ ಗ್ರಾಮ ಪಂಚಾಯಿತಿಗೆ ದೂರು ನೀಡಲಾಗಿತ್ತು. ಪೊಲೀಸರು ಮಹಿಳೆಯ ಮೃತದೇಹವನ್ನು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆ ನಡೆದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎನ್ನಲಾಗಿದೆ.
ಮಹಿಳೆ ಬಹಳ ಸಮಯದಿಂದ ಒಂಟಿಯಾಗಿ ವಾಸಿಸುತ್ತಿದ್ದು, ಆಕೆಯ ಸಂಬಂಧಿಕರು ಫೋಂಡಾದಲ್ಲಿ ವಾಸಿಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಘಟನೆಯ ಕುರಿತು ನಿಖರ ಕಾರಣ ತಿಳಿದುಬಂದಿಲ್ಲ.