ಪಣಜಿ: ಕರ್ನಾಟಕದಿಂದ ಗೋವಾಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ಕಾರಿನಲ್ಲಿದ್ದ ಮೂವರು ಗಾಯಗೊಂಡಿರುವ ಘಟನೆ ಧಾರವಾಡ ಬಳಿ ಬುಧವಾರ ಸಂಭವಿಸಿದೆ.
ಮೃತರನ್ನು ಬೆಂಗಳೂರಿನ ವಿನೋದ್ ಕುಮಾರ್ (31) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ ಕರ್ನಾಟಕದಿಂದ ಗೋವಾ ಕಡೆಗೆ ಬರುತ್ತಿದ್ದ ಕಾರು (ಕೆಎ 03 ಎನ್ 2470) ಪೋಂಡಾ ಕಡೆಗೆ ಹೋಗುತ್ತಿದ್ದಾಗ ತಿಸ್ಕಾರ್ ಭೂಮಿಕಾ ನಗರದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಿಳಯೆ ಟಿಸ್ಕ್‍ನಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ.
ಇದನ್ನೂ ಓದಿ: ಈ ಚಿತ್ರದ ಯಶಸ್ಸಿನಿಂದ ‘ಬಾಯ್ಕಾಟ್ ಸಂಸ್ಕೃತಿ’ ಕೊನೆಗೊಳ್ಳಬಹುದು: ಶಬಾನಾ ಅಜ್ಮಿ