Advertisement

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

06:41 PM May 07, 2024 | Team Udayavani |

ಪಣಜಿ: ಗೋವಾದಲ್ಲಿ ಮೇ 7 ರಂದು ಒಂದೇ ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆದಿದೆ. ರಾಜ್ಯಾದ್ಯಂತ ಬೆಳಿಗ್ಗೆಯಿಂದಲೇ ಉತ್ಸಾಹದಿಂದ ಮತದಾನಕ್ಕೆ ಮತದಾರರು ಆಗಮಿಸುತ್ತಿರುವ ದೃಶ್ಯ ಕಂಡುಬಂದಿದೆ.

Advertisement

ಗೋವಾ ರಾಜ್ಯದ ಉತ್ತರ ಗೋವಾದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಶೇ 12.80 ರಷ್ಟು ಮತ್ತು ದಕ್ಷಿಣ ಗೋವಾದಲ್ಲಿ ಶೇ.13.24 ರಷ್ಟು ಮತದಾನವಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಬೆಳಿಗ್ಗೆ 9 ಗಂಟೆಯವರೆಗೆ ಗೋವಾ ರಾಜ್ಯದಲ್ಲಿ ಒಟ್ಟು ಶೇ 13.02 ರಷ್ಟು ಮತದಾನವಾಗಿದೆ. 11 ಗಂಟೆಯವರೆಗೆ ಗೋವಾದಲ್ಲಿ ಶೇ 30.90 ರಷ್ಟು ಮತದಾನವಾಗಿದೆ.

ಉತ್ತರ ಗೋವಾದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಕೇಂದ್ರ ಸಚಿವ ಶ್ರೀಪಾದ ನಾಯ್ಕ ಪಣಜಿ ಸಮೀಪದ ರಾಯಬಂದರ್ ಸಾಪೇಂದ್ರದ ಮತಗಟ್ಟೆಯಲ್ಲಿ ತಮ್ಮ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.

ಗೋವಾದ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸುವುದು ಮಾತ್ರವಲ್ಲದೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಾಖಳಿ ಕೋಠಂಬಿ ಕ್ಷೇತ್ರದ ಮತಗಟ್ಟೆಯಲ್ಲಿ ತಮ್ಮ ಪತ್ನಿ ಸುಲಕ್ಷಣಾ ಸಾವಂತ್ ರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ದೋನಾಪಾವುಲ್‍ನಲ್ಲಿ ತಮ್ಮ ಪತ್ನಿಯೊಂದಿಗೆ ಮತಚಲಾಯಿಸಿದರು.

Advertisement

ಗೋವಾ ರಾಜ್ಯದಲ್ಲಿ ಶಾಂತಿಯುತ ಮತದಾನ ಪ್ರಕ್ರಿಯೆ ನಡೆದಿದ್ದು, ಬಿರು ಬಿಸಿಲಿನಲ್ಲೂ ಲೆಕ್ಕಿಸದೆಯೇ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತಗಟ್ಟೆಗೆ ಆಗಮಿಸುತ್ತಿರುವ ದೃಶ್ಯ ಕಂಡುಬಂತು.

ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

ಗೋವಾದ ಬಿಚೋಲಿ ನಗರದ ಮತಗಟ್ಟೆಯೊಂದರ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಬೆಳಿಗ್ಗೆ ಸುಮಾರು 27 ನಿಮಿಷಗಳ ಕಾಲ ತಡವಾಗಿ ಮತದಾನ ಪ್ರಕ್ರಿಯೆ ಆರಂಭಗೊಳ್ಳುವಂತಾಯಿತು

Advertisement

Udayavani is now on Telegram. Click here to join our channel and stay updated with the latest news.

Next