ಪಣಂಬೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಯೋಜಿಸಿ ಪ್ರತೀ ವರ್ಷ ಅದೇ ದಿನ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಟೀಮ್ ಮಂಗಳೂರು ತಂಡದ ಆಶ್ರಯದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ತಣ್ಣೀರುಬಾವಿ ಬೀಚ್‌ನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಗಾಳಿಪಟ ಉತ್ಸವ ಇಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ದೇಶ ವಿದೇಶಗಳಿಂದ ಬಹಳಷ್ಟು ಮಂದಿ ಭಾಗವಹಿಸಿದ್ದಾರೆ. ಜಿಲ್ಲೆಯ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಣೀಯವಾಗಿ ಮಾಡಲು ಇಂತಹ ಕಾರ್ಯಕ್ರಮಗಳು ಅಗತ್ಯವಿದ್ದು, ನಾನು ಕೂಡ ಇಷ್ಟು ವೈವಿಧ್ಯಮಯ ಗಾಳಿಪಟಗಳನ್ನು ಇಲ್ಲೇ ನೋಡಿದ್ದು ಎಂದು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೋಧಿಸಿದರು.
ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಜಿ.ಪಂ. ಸಿಇಒ ಡಾ| ಆನಂದ್, ಮನಪಾ ಆಯುಕ್ತ ಆನಂದ್, ಎಡಿಸಿ ಡಾ| ಸಂತೋಷ್, ಟೀಮ್ ಮಂಗಳೂರಿನ ಪದಾಧಿಕಾರಿಗಳು ಮತ್ತಿತರರು ಇದ್ದರು.