Advertisement
ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗ ಳೂರು ಮಹಾನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಶಕ್ತಿ ನಗರದ ಶಕ್ತಿ ಶಿಕ್ಷಣ ಸಮೂಹ ಸಂಸ್ಥೆಗಳ ಪಣಂಬೂರು ಬೀಚ್‌ನಲ್ಲಿ ಸ್ವತ್ಛ ಸುಂದರ ಬೀಚ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Related Articles
ಆಹಾರ ಮಳಿಗೆ ಮಾಲಕರು, ನೌಕರ ರಿಗೆ ಜಿಲ್ಲಾಧಿಕಾರಿ ಸ್ವಚ್ಚತೆಯ ಕ್ಲಾಸ್ ತೆಗೆದು ಕೊಂಡರು. ಮಳಿಗೆ ಬಳಿಗೆ ತೆರಳಿ ಗ್ರಾಹಕರು ಆಹಾರ ತಿಂದು ಅಲಲ್ಲಿ ಪೊಟ್ಟಣ ಬಿಸಾಡಿದರೆ ಏನು ಮಾಡುವಿರಿ, ನಿಮ್ಮ ತರಕಾರಿ ತ್ಯಾಜ್ಯ ಎಲ್ಲಿ ಬಿಸಾಡುವಿರಿ ಎಂದು ಪ್ರಶ್ನಿಸಿದರಲ್ಲದೆ, ಪ್ರವಾಸಿಗರಿಗೆ ಶುಚಿತ್ವ ಅರಿವು ಮೂಡಿಸುವ ಕೆಲಸ ನಿಮ್ಮಿಂದಾಗಬೇಕೆಂದರು. ಮಳಿಗೆ ಸುತ್ತಮುತ್ತ ಶುಚಿತ್ವ ಕಾಪಾಡುವ ಹೊಣೆಗಾರಿಕೆ ವಹಿಸದೆ ವ್ಯವಸ್ಥೆಯಿಲ್ಲ, ಮಾಡಿಕೊಟ್ಟಿಲ್ಲ ಎಂದು ದೂರಿದ ಅಂಗಡಿ ಮಾಲಕರಿಗೊಬ್ಬರಿಗೆ ಕ್ಲಾಸ್ ತೆಗೆದುಕೊಂಡರಲ್ಲದೆ ನೀವಾಗಿ ಜವಾಬ್ದಾರಿ ಮೆರೆಯಬೇಕೆಂದು ಸಲಹೆ ನೀಡಿದರು. ಸರಿಯಾಗಿ ಶುಚಿತ್ವ ಕಾಪಾಡಿ ಕೊಳ್ಳದಿದ್ದರೆ ಮಾಲಿನ್ಯ ನಿಯಂತ್ರಣ ವಿಭಾಗದ ಅಧಿಕಾರಿಗಳು ಕ್ರಮ ತೆಗೆದು ಕೊಳ್ಳಬೇಕಾಗುತ್ತದೆ ಇದಕ್ಕೆ ಆಸ್ಪದ ಕೊಡಬೇಡಿ ಎಂದು ಎಚ್ಚರಿಸಿದರು.
Advertisement
ಸಾಂಸ್ಕೃತಿಕ ಪರಂಪರೆಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶ ಹಾಗೂ ನದಿ,ಕಡಲ ತೀರವನ್ನು ಹೊಂದಿದೆ. ತುಳುನಾಡಿನ ಸಮೃದ್ಧವಾದ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಜಿಲ್ಲೆಯ ಬೀಚ್‌ಗಳು ಹಾಗೂ ಇಲ್ಲಿನ ಪ್ರವಾಸಿ ತಾಣಗಳಿಗೆ ದೇಶ ವಿದೇಶದಿಂದ ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದುದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಹೂಡಿಕೆಗೆ ಸರಕಾರ ಅವಕಾಶ ಕಲ್ಪಿಸುತ್ತಿದೆ. ಈ ನಿಟ್ಟಿನಲ್ಲಿ ಬೀಚ್ ಗಳ ಸತ್ಛತೆಗಾಗಿ ಸಾಮೂಹಿಕ ಸಹಭಾಗಿತ್ವದಲ್ಲಿ ಸಂಘವು ತೊಡಗಿಸಿ ಕೊಂಡಿರುವುದು ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.