Advertisement

ಪಂಚಲಿಂಗ ದರ್ಶನಕ್ಕೆ ಒಂದು ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲು ಸಿಎಂ ಸೂಚನೆ

08:20 PM Nov 25, 2020 | sudhir |

ಮೈಸೂರು: ಒಂದು ಸಾವಿರ ಜನಕ್ಕೆ ಸೀಮಿತಗೊಳಿಸಿ, ಸರಳವಾಗಿ ಪಂಚಲಿಂಗ ದರ್ಶನ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

Advertisement

ಬುಧವಾರ ತಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಪಂಚಲಿಂಗ ದರ್ಶನ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು ಈ ವೇಳೆ ಮಾತನಾಡಿದ ಸಿಎಂ ಪಂಚಲಿಂಗ ದರ್ಶನದ ಹಿನ್ನೆಲೆಯಲ್ಲಿ ಅಗತ್ಯ ಕೆಲಸಗಳನ್ನು ತುರ್ತಾಗಿ ಕೈಗೊಳ್ಳಲು ಸೂಚಿಸಿದ್ದಾರೆ.

ನಂತರ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ರಸ್ತೆ ಗುಂಡಿ ಮುಚ್ಚುವ ಕೆಲಸ ನಾಳೆಯಿಂದಲೇ ಕೈಗೊಳ್ಳಲಾಗುತ್ತದೆ. ಈ ಕೆಲಸವನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.

ಪಂಚಲಿಂಗ ದರ್ಶನ ಮಹೋತ್ಸವಕ್ಕೆ 2.2 ಕೋಟಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದೆ. ಈ ವೆಚ್ಚವನ್ನು ಮರುಪರಿಶೀಲಿಸಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.

ಇದನ್ನೂ ಓದಿ:ರಾತ್ರಿ 2 ಗಂಟೆಗೆ ಅಪ್ಪಳಿಸಲಿರುವ ನಿವಾರ್ ಚಂಡಮಾರುತ; NDRF ಸನ್ನದ್ಧ, 1 ಲಕ್ಷ ಮಂದಿ ಶಿಫ್ಟ್

Advertisement

ಸಭೆಯಲ್ಲಿ ಮುಜರಾಯಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್.ಎ.ರಾಮದಾಸ್, ಎಂ.ಅಶ್ವಿನ್ ಕುಮಾರ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಪ್ರಾದೇಶಿಕ ಆಯುಕ್ತರಾದ ಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next