Advertisement
ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎ ಗೆ ಸೇರಿಸಬಾರದು. ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ – ಉಪಜಾತಿಗಳನ್ನು ಸೇರ್ಪಡೆಗೊಳಿಸಬೇಕು ಮತ್ತು ಸ್ಥಳೀಯ ಚುನಾವಣೆಗಳಲ್ಲಿ ಅತಿ ಹಿಂದುಳಿದ ವರ್ಗಗಳಿಗೂ ಮೀಸಲಾತಿ ನೀಡಬೇಕು ಹಾಗೂ ಹೆಚ್. ಕಾಂತರಾಜ ವರದಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ, ಕರ್ನಾಟಕ ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಮನವಿ ಸಲ್ಲಿಸಲಾಯ್ತು.
Related Articles
Advertisement
ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವುದು ಸರಿಯಲ್ಲ. ಇದ್ರಿಂದ ಅತೀ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ. ಒಂದು ವೇಳೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಿದ್ರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಮ್. ಸಿ. ವೇಣುಗೋಪಾಲ್ ಹೇಳಿದ್ರು.
1992ರ ಮಂಡಲ್ ಆಯೋಗದ ವರದಿಯಂತೆ ಕರ್ನಾಟಕದ 323 ಜಾತಿ-ಉಪಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆನಂತರದಲ್ಲಿ 283 ಜಾತಿ-ಉಪಜಾತಿಗಳನ್ನು ಮೀಸಲಾತಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು. ಆದರೂ ಸುಮಾರು 70 ಜಾತಿ ಉಪಜಾತಿಗಳು ರಾಜ್ಯ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದರೂ, ಕೇಂದ್ರದ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಹೀಗಾಗಿ. ಈ ವರ್ಗಗಳ ಸವಾರ್ಂಗೀಣ ಅಭಿವೃದ್ಧಿಗೆ ಅನುಕೂಲವಾಗಲು, ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇವುಗಳನ್ನು ಸೇರಿಸಬೇಕು ಎಮ್. ಸಿ. ವೇಣುಗೋಪಾಲ್ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಹಾಗೂ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ನಾಗರಾಜು, ಖಜಾಂಚಿ ಎಲ್.ಎ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.