Advertisement

ಬಜೆಟ್ ಗೂ ಮುನ್ನ ಬಿಎಸ್ ವೈ ಗೆ ಪ್ರತಿಭಟನೆ ಬಿಸಿ: ಸಿಎಂ ನಿವಾಸದೆದುರು ಮಹಿಳೆಯರ ಪ್ರತಿಭಟನೆ

11:07 AM Mar 08, 2021 | keerthan |

ಬೆಂಗಳೂರು: ಎಂಟನೇ ಬಜೆಟ್ ಮಂಡಿಸಲು ಸಿದ್ದರಾಗಿರುವ ಸಿಎಂ ಬಿ ಎಸ್ ಯಡಿಯೂರಪ್ಪನವರಿಗೆ ಇಂದು ಬೆಳಗ್ಗೆ ತಮ್ಮ ನಿವಾಸದೆದುರು ಪ್ರತಿಭಟನೆ ಎದುರಿಸಬೇಕಾಯಿತು.

Advertisement

ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಸಿಎಂ ಬಿ ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲು ಪಂಚಮಸಾಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ್ ನೇತೃತ್ವದಲ್ಲಿ ಮಹಿಳೆಯರು ಆಗಮಿಸಿದ್ದರು. ಆದರೆ ಒಮ್ಮೆಲೆ ನೂರಾರು ಮಹಿಳೆಯರು ಆಗಮಿಸಿದ ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯರನ್ನು ತಡೆದರು.

ಇದನ್ನೂ ಓದಿ:ಸೋಮವಾರದಿಂದ ಬಜೆಟ್‌ ಅಧಿವೇಶನದ 2ನೇ ಹಂತ ಕಲಾಪ ಆರಂಭ

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪಂಚಮಸಾಲಿ ಮಹಿಳಾ ಘಟಕ ಸಿಎಂ ನಿವಾಸ ಕಾವೇರಿ ಎದುರು ಪ್ರತಿಭಟನೆ ನಡೆಸಿತು.

Advertisement

Udayavani is now on Telegram. Click here to join our channel and stay updated with the latest news.

Next