ಬೆಳಗಾವಿ: ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೋಮವಾರ(ಡಿ9) ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಪಂಚಮಸಾಲಿ ಮೀಸಲಾತಿ ಹೋರಾಟ ಸಂಬಂಧ ಕೂಡಲಸಂಗಮ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ’ ಎಂದು ತಿಳಿಸಿದರು.
‘ಕೆಲವು ವೈಯಕ್ತಿಕ ಕಾರಣಕ್ಕೆ ಪಂಚಮಸಾಲಿ ಹೋರಾಟಕ್ಕೆ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ಬೆಂಬಲ ಇಲ್ಲ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ ಎಂದು ಸ್ವಾಮೀಜಿ ಅವರಿಗೆ ತಿಳಿಸಲಾಗಿದೆ .ಹಿಂದೆ ಯಡಿಯೂರಪ್ಪ ಅವರ ನೇತೃತ್ವದ ಬಿ ಜೆ ಪಿ ಸರಕಾರವಿದ್ದಾಗ ಪಂಚಮಸಾಲಿ ಸಮಾಜಕ್ಕೆ
3 b ಕೊಡಲಾಗಿತ್ತು. ಆಗ
3 b ಕೊಟ್ಟ ಕಾರಣದಿಂದಲೇ ಸಮಾಜಕ್ಕೆ 2 A ಸ್ಥಾನಮಾನ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸಲು ಸಾಧ್ಯವಾಗಿದೆ. ಈ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ. ಯಡಿಯೂರಪ್ಪ ಅವರ ವಿರೋಧ ಇದೆ, ಅನ್ಯಾಯ ಮಾಡಿದರು ಎಂಬ ಆರೋಪಗಳು ಸತ್ಯಕ್ಕೆ ದೂರ’ ಎಂದು ವಿಜಯೇಂದ್ರ ಹೇಳಿದರು.
”ಸ್ವಾಮೀಜಿಗಳಿಗೆ ಸಾಕಷ್ಟು ತಪ್ಪು ಅಭಿಪ್ರಾಯಗಳಿತ್ತು. ಕಾಂಗ್ರೆಸ್ ಸರಕಾರ ಬಂದ ಬಳಿಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಹಿಂದೆ ಯಾವುದೇ ಸರಕಾರ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ ಸಹ ನಮ್ಮ ಸಮಾಜದ ಮೇಲೆ ಈ ರೀತಿ ದೌರ್ಜನ್ಯಗಳು ಆಗಿಲ್ಲ ಎಂದು ಸ್ವಾಮೀಜಿ ತಿಳಿಸಿದ್ದಾರೆ” ಎಂದು ವಿಜಯೇಂದ್ರ ಹೇಳಿದರು.