Advertisement
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಂಚಮಿತ್ರ ಪೋರ್ಟಲ್‌ನ ಲಾಂಛನ ಅನಾವರಣಗೊಳಿಸಿ ಮಾತನಾಡಿದ ಅವರು, ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಪಂಗಳ ವಿವಿಧ ಮಾಹಿತಿ, ವಿವರಗಳನ್ನು ಪಡೆಯಲು ಮತ್ತು ಗ್ರಾಪಂಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್‌ಸೈಟ್ ಮತ್ತು ಪೋರ್ಟಲ್‌ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೆ ಎಲ್ಲ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಿಸಿಕೊಳ್ಳಲು ಯಾವುದೇ ನಿರ್ದಿಷ್ಟವಾದ ವೆಬ್‌ಸೈಟ್ ಅಥವಾ ಪೋರ್ಟಲ್‌ಗಳು ಇರಲಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಬರುವ ರಾಜ್ಯದ ಎಲ್ಲ ಗ್ರಾಪಂಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ವಾಟ್ಸ್‌ಆಪ್ ಚಾಟ್ ತಂತ್ರಜ್ಞಾನವನ್ನು ದೇಶದಲ್ಲೇ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹದೇವನ್ ಸೇರಿದಂತೆ ಇನ್ನಿತರ ಅಧಿ ಕಾರಿಗಳು ಇದ್ದರು. ಏನಿದು ಪಂಚಮಿತ್ರ?
ಪಂಚಮಿತ್ರ ಪೋರ್ಟಲ್ ಮೂಲಕ ಗ್ರಾಪಂಗಳ ಮಾಹಿತಿಗಳಾದ ಚುನಾಯಿತ ಪ್ರತಿನಿ ಧಿಗಳ ವಿವರ, ಸಿಬಂದಿ ವಿವರ, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿ, ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು, ಗ್ರಾ.ಪಂ.ಗಳ ಕಾರ್ಯಕ್ರಮಗಳು ಮತ್ತು ಉಪಕ್ರಮಗಳು, 4 (1) (ಎ) 4 (1) (ಬಿ) ಆರ್‌ಟಿಐ ದಾಖಲೆಗಳ ವಿವರಗಳನ್ನು ಪಡೆಯಬಹುದಾಗಿದೆ.
Related Articles
ಗ್ರಾಪಂಗಳಿಗೆ ಸಂಬಂಧಿ ಸಿ ಕಟ್ಟಡ ನಿರ್ಮಾಣ ಪರವಾನಿಗೆ ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜು ಸಂಪರ್ಕದ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಿಗೆ, ಸ್ವಾಧಿಧೀನ ಪ್ರಮಾಣಪತ್ರ, ರಸ್ತೆ, ಅಗೆಯಲು ಅನುಮತಿ, ಕೈಗಾರಿಕೆ/ಕೃಷಿ ಆಧಾರಿತ ಉತ್ಪಾದನ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣ ಪತ್ರ, ಅಡಿಯಲ್ಲಿ ಕಾರ್ಮಿಕರಿಗೆ ಜಾಬ್‌ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ ಅಥವಾ ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ, ನಿಯಮಿತಗೊಳಿಸುವಿಕೆ, ಓವರ್ ಗ್ರೌಂಡ್ ಕೇಬಲ್ ಮೂಲಸೌಕರ್ಯ, ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಅನುಮತಿ, ನಮೂನೆ 9/11ಎ, ನಮೂನೆ 11ಬಿ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದಾಗಿದೆ ಹಾಗೂ ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ.
Advertisement