Advertisement

ಪಂಚಮಸಾಲಿ ಮೀಸಲಾತಿ: ನಾನು ಗಡುವು ನೀಡಿಲ್ಲ: ಸಿಎಂ ಬೊಮ್ಮಾಯಿ

09:52 PM Dec 20, 2022 | Team Udayavani |

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ನಾನು ಯಾವುದೇ ಗಡುವು ನೀಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಲು ಕುಲಶಾಸ್ತ್ರೀಯ ಅಧ್ಯಯನ ಅಗತ್ಯವಿದೆ. ಹಿಂದುವಳಿದ ವರ್ಗದ ಆಯೋಗಕ್ಕೆ ವರದಿ ಸಿದ್ಧಪಡಿಸಿ ಕೊಡುವಂತೆ ಹೇಳಿದ್ದೆ. ಅದರಲ್ಲೂ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೂ ಮುಂಚೆಯೇ ವರದಿ ನೀಡುವಂತೆ ಹೇಳಿದ್ದೆ. ಆದರೆ ಆಯೋಗ ಈ ವರೆಗೂ ವರದಿ ನೀಡಿಲ್ಲ. ಅವರು ಶೀಘ್ರವೇ ವರದಿ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.

ಈ ಮಧ್ಯೆ, ಪಂಚಮಸಾಲಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಡಿ.19ರ ಗಡುವು ನೀಡಿದ್ದ ಸಮುದಾಯದ ರಾಜಕೀಯ ಮುಖಂಡರು ಮುಖ್ಯಮಂತ್ರಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ಹೋರಾಟದ ಮುಂಚೂಣಿ ನಾಯಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಸುವರ್ಣಸೌಧದ ಮೊಗಸಾಲೆಯಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿ, ಮುಖ್ಯಮಂತ್ರಿಗಳು ಸಮುದಾಯದ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ. ಆದರೆ ಡಿ.22ರ ಒಳಗಾಗಿ ಮೀಸಲಾತಿ ಘೋಷಿಸಬೇಕು. ಇದನ್ನು ಮುಖ್ಯಮಂತ್ರಿಗಳು ಮಾಡಿಯೇ ಮಾಡುತ್ತಾರೆ ಎನ್ನುವ ವಿಶ್ವಾಸ ನನಗೆ ಇದೆ. ಇಲ್ಲವಾದರೆ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.

ಪಂಚಮಸಾಲಿ ಹರಿಹರ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅವರು ಸರಕಾರದಲ್ಲಿನ ಕೆಲವರ ಮಾತು ಕೇಳಿ ಹೋರಾಟದ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದಾರೆ. ಹೋರಾಟದಲ್ಲಿ ಕಾಣಿಸಿಕೊಳ್ಳದೇ ಇದ್ದವರೂ ಈಗ ಎಲ್ಲರಿಗಿಂತಲೂ ಮುಂಚೆಯೇ ಬಂದು ನಾವು ಮಾಡಿದ್ದು ಎಂದು ಹೇಳುತ್ತ ಓಡಾಡುತ್ತಿದ್ದಾರೆ. ಯಾರು ಎಷ್ಟೇ ಅಪಪ್ರಚಾರ ಮಾಡಿದರೂ ನಾವು ಮಾತ್ರ ಹಿಡಿದ ಕೆಲಸ ಬಿಡುವುದಿಲ್ಲ ಎಂದು ಯತ್ನಾಳ್‌ ಪರೋಕ್ಷವಾಗಿ ತಮ್ಮ ವಿರೋಧಿಗಳು ಕುಟುಕಿದರು.

Advertisement

Udayavani is now on Telegram. Click here to join our channel and stay updated with the latest news.

Next