Advertisement

Kannada Actor ದೊಡ್ಡಣ್ಣರವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

10:10 PM Oct 04, 2023 | Team Udayavani |

ಕೋಟ: ಚಿತ್ರರಂಗದ ಶ್ರೇಷ್ಠ ನಟ ದೊಡ್ಡಣ್ಣರವರಿಗೆ ಕೋಟ ಪಂಚವರ್ಣ ಸಂಘದ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.

Advertisement

ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ನವೆಂಬರ್ 10 ರಂದು ಕೋಟದಲ್ಲಿ ನಡೆಯುವ ಸದ್ಭಾವನಾ 2023 ಎಂಬ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ Cinema, actor Doddannaಬಂದಿದೆ. ಈ ಬಾರಿ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ದೊಡ್ಡಣ ರವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದೆ.

ಇದೇ ವೇಳೆ ವಿಶೇಷ ಅಭಿನಂದನೆಯನ್ನು ಅಮ್ಮಚ್ಚಿ ಎಂಬ ನೆನಪು ಚಿತ್ರದ ನಾಯಕ ರಂಗನಟ ಡಾ. ರಾಧಕೃಷ್ಣ ಉರಾಳ ಇವರಿಗೆ ನೀಡಲಿದ್ದು, ವಿಶೇಷ ಪುರಸ್ಕಾರವನ್ನು ಪರಿಸರಸ್ನೇಹಿ ಸಂಘಟನೆ ಕ್ಲಿನ್ ತ್ರಾಸಿ ತಂಡಕ್ಕೆ ನೀಡಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next