Advertisement

North Delhi: ಮನೆಯೊಳಗೆ ನುಗ್ಗಿದ ಚಿರತೆ, ಐವರ ಮೇಲೆ ದಾಳಿ; ಆಸ್ಪತ್ರೆಗೆ ದಾಖಲು

11:25 AM Apr 01, 2024 | Team Udayavani |

ನವದೆಹಲಿ: ಹಾಡಹಗಲೇ ಚಿರತೆಯೊಂದು ದೆಹಲಿಯ ರೂಪ್‌ ನಗರ್‌ ಪ್ರದೇಶದಲ್ಲಿನ ಮನೆಯೊಂದಕ್ಕೆ ನುಗ್ಗಿ ಐವರ ಮೇಲೆ ದಾಳಿ ನಡೆಸಿರುವ ಘಟನೆ ಸೋಮವಾರ (ಏಪ್ರಿಲ್‌ ೦1) ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:Lost Control: ಬೀಚ್ ಬದಿ ಕಾರು ಚಲಾಯಿಸಿ ಹುಚ್ಚು ಸಾಹಸ ಮಾಡಲು ಹೋಗಿ ಏನಾಯ್ತು ನೋಡಿ…

ದೆಹಲಿ ಅಗ್ನಿ ಶಾಮಕ ದಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಬೆಳಗ್ಗೆ 6.30ರ ಹೊತ್ತಿಗೆ ಚಿರತೆ ಮನೆಯೊಳಗೆ ನುಗ್ಗಿರುವ ಬಗ್ಗೆ ಮಾಹಿತಿ ಬಂದಿತ್ತು. ಕೂಡಲೇ ದೆಹಲಿಯ ವಝಿರಾಬಾದ್‌ ನ ಜಗತ್‌ ಪುರ್‌ ಗ್ರಾಮಕ್ಕೆ ಎರಡು ಅಗ್ನಿಶಾಮಕ ದಳವನ್ನು ಕಳುಹಿಸಿಕೊಡಲಾಗಿತ್ತು ಎಂದು ತಿಳಿಸಿದ್ದಾರೆ.

ಸ್ಥಳೀಯ ಜನರ ನೆರವಿನೊಂದಿಗೆ ಚಿರತೆಯನ್ನು ಸೆರೆಹಿಡಿಯಲಾಯಿತು. ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ದೆಹಲಿ ಅಗ್ನಿಶಾಮಕ ದಳದ ಮುಖ್ಯಸ್ಥ ಅತುಲ್‌ ಗರ್ಗ್‌ ಹೇಳಿದರು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next