ಢಾಕಾ: ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಇಂದು ಢಾಕಾದಲ್ಲಿ ಆರಂಭವಾಗಿದೆ. ಪಂದ್ಯವಾಡಲು ಕಣಕ್ಕಿಳಿದ ಭಾರತ ತಂಡದಲ್ಲಿ ಹಲವಾರು ಬದಲಾವಣೆ ಮಾಡಲಾಗಿದೆ.
ಪ್ರಮುಖವಾಗಿ ತಂಡದ ಪ್ರಮುಖ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಭಾರತ ಏಕದಿನ ತಂಡದಿಂದ ಬಿಡುಗಡೆ ಮಾಡಲಾಗಿದೆ.
ಪಂತ್ ಅಭ್ಯತೆಯ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ. ಆದರೆ ಅಲಭ್ಯತೆಗೆ ನಿರ್ದಿಷ್ಟ ಕಾರಣ ಬಹಿರಂಗಪಡಿಸಿಲ್ಲ. ಬಿಸಿಸಿಐ ವೈದ್ಯಕೀಯ ತಂಡದೊಂದಿಗೆ ಸಮಾಲೋಚಿಸಲಾಗಿದೆ ಮತ್ತು ಪಂತ್ ಬದಲಿಗೆ ಯಾರನ್ನೂ ತಂಡಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಪ್ರಕಟಣೆ ಹೇಳಿದೆ.
ಇದನ್ನೂ ಓದಿ:ಸಿದ್ದಾರಾಮಯ್ಯಗೆ ನನ್ನ ಕ್ಷೇತ್ರ ಬಿಟ್ಟು ಕೊಡುತ್ತೇನೆ: ಸಂತೋಷ ಲಾಡ್
Related Articles
ಡಿಸೆಂಬರ್ 14 ರಂದು ಆರಂಭವಾಗಲಿರುವ ಟೆಸ್ಟ್ ಸರಣಿಗೂ ಮುನ್ನ ಪಂತ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಭಾನುವಾರ ಬೆಳಗ್ಗೆ ಢಾಕಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ಟಾಸ್ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ, “ಕೆಲವರಿಗೆ ಗಾಯಗಳಾಗಿವೆ” ಮತ್ತು ಪಂದ್ಯದಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಮಾಡುತ್ತಾರೆ ಎಂದು ಉಲ್ಲೇಖಿಸಿದ್ದಾರೆ.
ಪಂತ್ ಮಾತ್ರವಲ್ಲದೆ ಅಕ್ಷರ್ ಪಟೇಲ್ ಕೂಡಾ ಮೊದಲ ಏಕದಿನ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ಹೇಳಿದೆ.