ಪಾಟ್ನಾ: ಲೋಕಸಭಾ ಮಾಜಿ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಬುಧವಾರ (ಮಾರ್ಚ್ 20) ತನ್ನ ಜನ್ ಅಧಿಕಾರ್ ಪಕ್ಷವನ್ನು ಕಾಂಗ್ರೆಸ್ ಪಕ್ಷದ ಜತೆ ವಿಲೀನಗೊಳಿಸಿದ್ದು, ಇದರಿಂದಾಗಿ ಬಿಹಾರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಬಲ ಬಂದಂತಾಗಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ರಾಮ್ ಚರಣ್ – ಜಾಹ್ನವಿ ʼRC 16′ ಸಿನಿಮಾದ ಮುಹೂರ್ತ: ವಿಶೇಷ ಪಾತ್ರದಲ್ಲಿ ಶಿವರಾಜ್ ಕುಮಾರ್
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಪ್ಪು ಯಾದವ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಮತ್ತು ಲಾಲುಪ್ರಸಾದ್ ಪಕ್ಷ ಒಟ್ಟಾಗಿ ಸ್ಪರ್ಧಿಸಲಿದ್ದು, 2025ರ ವಿಧಾನಸಭಾ ಚುನಾವಣೆಯಲ್ಲಿಯೂ ಮೈತ್ರಿಯಾಗಿ ಅಖಾಡಕ್ಕಿಳಿಯುವುದಾಗಿ ಪಪ್ಪು ತಿಳಿಸಿರುವುದಾಗಿ ವರದಿಯಾಗಿದೆ.
ಕಾಂಗ್ರೆಸ್ ಪಕ್ಷ ಸೇರ್ಪಡೆಗೂ ಮುನ್ನ ಯಾದವ್, ಲಾಲುಪ್ರಸಾದ್ ಮತ್ತು ತೇಜಸ್ವಿ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಯಾವುದೇ ವೈಷಮ್ಯ ಇಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.
ಬಿಹಾರದಲ್ಲಿ ಪಪ್ಪು ಯಾದವ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ದೊಡ್ಡ ಬಲಬಂದಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ಪವನ್ ಖೇರಾ ತಿಳಿಸಿದ್ದು, ಪಪ್ಪು ಯಾದವ್ ಬಿಹಾರದಲ್ಲಿ ರಾಜಕೀಯವಾಗಿ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿರುವುದಾಗಿ ಹೇಳಿದರು.