Advertisement

ಗೋ ಕಳವು ಆರೋಪಿಗಳ ಪರೇಡ್‌

12:16 AM Dec 10, 2019 | Team Udayavani |

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ 75ಕ್ಕೂ ಅಧಿಕ ಆರೋಪಿಗಳನ್ನು ಸೋಮವಾರ ಪೊಲೀಸ್‌ ಆಯುಕ್ತ ಡಾ| ಹರ್ಷಾ ಪಿ.ಎಸ್‌. ಅವರು ಜಿಲ್ಲಾ ಪೊಲೀಸ್‌ ಮೈದಾನಿನಲ್ಲಿ ಪರೇಡ್‌ ನಡೆಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್‌ ಆಯುಕ್ತರು “ದನ ಕಳವು ಕೃತ್ಯ ಅಥವಾ ಇನ್ಯಾವುದೇ ಸಮಾಜ ಬಾಹಿರ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಎಲ್ಲ ಪೊಲೀಸ್‌ ಠಾಣೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಕ್ರಮ ದನ ಸಾಗಾಟ, ದನ ಕಳವು ಕೃತ್ಯದಲ್ಲಿ ಯಾರೇ ಭಾಗಿಯಾದರೂ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ. ನಮ್ಮ ಸಿಬಂದಿ ಯಾವುದೇ ಮುಲಾಜಿಲ್ಲದೆ ಸಂಬಂಧಪಟ್ಟ ಆರೋಪಿ ಗಳನ್ನು ಗಲ್ಲಿಗಲ್ಲಿಯಿಂದ ಬಂಧಿಸಲಿದ್ದಾರೆ’ ಎಂದು ಎಚ್ಚರಿಕೆ ನೀಡಿದರು.

ಇಲಾಖೆಯಿಂದ ರೌಡಿಶೀಟರ್‌ಗಳಿಗೆ ಮಾರ್ಗದರ್ಶನ ಮಾಡಿ ಸರಿದಾರಿಗೆ ತರಲು ಪ್ರಯತ್ನ ಮಾಡ ಲಾಗುತ್ತಿದ್ದು, ಈ ದಿಶೆಯಲ್ಲಿ ಹಲವು ಅವಕಾಶಗಳನ್ನು ನೀಡಲಾಗುತ್ತಿದೆ. ಇದರ ಮಧ್ಯೆಯೂ ಕೆಲವರು ತಮ್ಮ ಹಳೆಯ ಚಾಳಿಯನ್ನೇ ಮುಂದು ವರಿಸಿದರೆ ಕಾನೂನು ಪ್ರಕಾರ ಇಲಾಖೆ ಕಠಿನ ಕ್ರಮಕೈಗೊಳ್ಳಲಿದೆ ಎಂದರು.

ಡಿಸಿಪಿಗಳಾದ ಅರುಣಾಂಶುಗಿರಿ ಮತ್ತು ಲಕ್ಷ್ಮೀ ಗಣೇಶ್‌, ಎಸಿಪಿಗಳಾದ ಶ್ರೀನಿವಾಸ್‌ ಗೌಡ, ಕೋದಂಡರಾಮ, ಜಗದೀಶ್‌, ವಿನಯ್‌ ಗಾಂವ್‌ಕರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next