Advertisement

ಐಟಿ ದಾಳಿಯ ಬೆನ್ನಲ್ಲೇ ಪರಮೇಶ್ವರ್ ಆಪ್ತಸಹಾಯಕ ಆತ್ಮಹತ್ಯೆ

09:38 AM Oct 13, 2019 | keerthan |

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಅವರ ಆಪ್ತ ಸಹಾಯಕ ರಮೇಶ್ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.

Advertisement

ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿ ಗ್ರೌಂಡ್ ಬಳಿ ಮರಕ್ಕೆ ನೇಣು ಬಿಗಿದುಕೊಂಡು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಾ.ಜಿ ಪರಮೇಶ್ವರ್ ಅವರ ಮನೆ ಮೇಲೆ ಐಟಿ ದಾಳಿ ನಡೆದ ಸಂದರ್ಭ ಅಧಿಕಾರಿಗಳು ರಮೇಶ್ ಅವರನ್ನು ಪ್ರಶ್ನೆಗಳನ್ನು ಕೇಳಿದ್ದರು ಎನ್ನಲಾಗಿದೆ.

ಕುಣಿಗಲ್ ಮೂಲದ ರಮೇಶ್ ಅವರು ಕೆಪಿಸಿಸಿ ಕಚೇರಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾದ ನಂತರ ಅವರ ಆಪ್ತಸಹಾಯಕನಾಗಿ ಕೆಲಸಕ್ಕೆ ಸೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next