ಡಾ. ಜಿ. ಪರಮೇಶ್ವರ್ ಸಿಟ್ಟಾದ ಪ್ರಸಂಗ ಸೋಮವಾರ ನಡೆಯಿತು.
Advertisement
ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮ ದಿನಾಚರಣೆ ಕಾರ್ಯಕ್ರಮದ ಬಳಿಕ, “ಮುಂದಿನ ವರ್ಷ ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರಲ್ಲ’ ಎಂಬ ಮಾಧ್ಯಮದವರ ಪ್ರಶ್ನೆಗೆ ಪರಮೇಶ್ವರ್ ಗರಂ ಆದರು. “ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಆದರೆ, ಯಾರಾದರೊಬ್ಬರಮುಂದಾಳತ್ವ ಬೇಕಲ್ಲ? ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರೇ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಮುಂದಿನ ಚುನಾವಣೆಗೆ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹೋಗುತ್ತೇವೆ. ಮುಖ್ಯಮಂತ್ರಿ ಯಾರು ಅನ್ನುವುದನ್ನು ಹೈ ಕಮಾಂಡ್ ತೀರ್ಮಾನಿಸುತ್ತದೆ. ಸಿದ್ದರಾಮಯ್ಯನವರೇ ಸಿಎಂ ಆಗಬೇಕು ಎಂದು ಹೈಕಮಾಂಡ್ ಹೇಳಿದರೆ, ಎಲ್ಲರೂ ಒಪ್ಪಿಕೊಳ್ಳುತ್ತೇವೆ. ಯಾವ ಗೊಂದಲಗಳೂ ಇಲ್ಲ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕೃತವಾಗಿ ಈ ಮಾತು ಹೇಳುತ್ತಿದ್ದೇನೆ. ಯಾರು ಏನೇ ಹೇಳಿದರೂ ಅದಕ್ಕೆಲ್ಲ ಕಿಮ್ಮತ್ತು ಕೊಡಬೇಡಿ’ ಎಂದು ಪರಮೇಶ್ವರ್ ಹೇಳಿದರು.