Advertisement
ಗಣ್ಯ ವ್ಯಕ್ತಿಗಳ ಸಂಚಾರದ ವೇಳೆ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಆ್ಯಂಬುಲೆನ್ಸ್ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಸಮಸ್ಯೆಯಾಗಿರುವುದನ್ನು ನಾನು ಖುದ್ದಾಗಿ ನೋಡಿದ್ದೇನೆ.
ಎಂದು ತಿಳಿಸಿದ್ದಾರೆ. ಈ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು ಅವರಿಗೆ ಪತ್ರ ಸಹ ಬರೆದಿರುವ ಡಾ.ಜಿ.ಪರಮೇಶ್ವರ್, ನಾನೂ ಸೇರಿ ಬೇರೆ ಯಾವುದೇ ಗಣ್ಯ ವ್ಯಕ್ತಿಗಳು ಸಂಚರಿಸುವ ಸಂದರ್ಭದಲ್ಲಿ ಶಿಷ್ಟಾಚಾರ ಬದಿಗೊತ್ತಿ ಆ್ಯಂಬುಲೆನ್ಸ್‌ಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ, ಗೃಹ ಮಂತ್ರಿಗಳು ಸೇರಿ ಗಣ್ಯ ವ್ಯಕ್ತಿಗಳ ಸಂಚಾರ ಸಂದರ್ಭದಲ್ಲಿ ಆ್ಯಂಬುಲೆನ್ಸ್ ಸಂಚಾರಕ್ಕೆ ತಡೆಯೊಡ್ಡುತ್ತಿರುವುದು ಹಾಗೂ ಅದರಿಂದ ತೊಂದರೆ ಉಂಟಾಗುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದಿದೆ. ನಾನೂ ಸಹ ರಾಜ್ಯಾದ್ಯಂತ ಸಂಚರಿಸುವ ಸಂದರ್ಭದಲ್ಲಿ ಶಿಷ್ಟಾಚಾರದಂತೆ ಟ್ರಾಫಿಕ್ ಫ್ರೀ ಮಾಡಲು ಕೆಲ ಬಾರಿ ಆ್ಯಂಬುಲೆನ್ಸ್ ತಡೆದು ನಿಲ್ಲಿಸಿದ್ದು ನೋಡಿದ್ದೇನೆ. ಗಣ್ಯ ವ್ಯಕ್ತಿಗಳಿಗಿಂತ ಮೊದಲು ಆ್ಯಂಬುಲೆನ್ಸ್ ಸಂಚರಿಸಲು ಮುಕ್ತ ಅವಕಾಶ ನೀಡಬೇಕೆಂದು ಹೇಳಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಕೂಡ ನಾನು ಸಂಚರಿಸುವ ಸಂದರ್ಭದಲ್ಲಿ ಯಾವುದೇ ಶಿಷ್ಟಾಚಾರ ಪಾಲಿಸದೆ ಆ್ಯಂಬುಲೆನ್ಸ್‌ಗೆ ಅವಕಾಶ ನೀಡಬೇಕೆಂದು ಸೂಚಿಸಿದ್ದರು. ಆದರೂ ಕೆಲ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ಒತ್ತಡಕ್ಕೆ ಮಣಿದು ಸಂಚಾರ ಸಿಬ್ಬಂದಿ ಮುಖ್ಯಮಂತ್ರಿಗಳ ಸಂಚಾರಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡುತ್ತಿದ್ದರು.