Advertisement

ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು: ಕಪ್ಪಗಲ್ಲು ಒಂಕಾರಪ್ಪ ಆಗ್ರಹ

12:34 PM May 14, 2023 | Team Udayavani |

ಕುರುಗೋಡು: ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿ ಜಯಭೇರಿ ಬಾರಿಸುವ ಮೂಲಕ ಪಕ್ಷಕ್ಕೆ ಬಹುಮತ ನೀಡಿರುವ ಡಾ. ಜಿ. ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೈನ್ಯದ ಬಳ್ಳಾರಿ ಜಿಲ್ಲಾಧ್ಯಕ್ಷ ಕಪ್ಪಗಲ್ಲು ಒಂಕಾರಪ್ಪ ಅಗ್ರಹಿಸಿದ್ದಾರೆ.

Advertisement

ನಂತರ ಮಾತನಾಡಿದ ಅವರು, ಡಾ.ಜಿ.ಪರಮೇಶ್ವರ್ ಅವರು ಅನೇಕ ಬಾರಿ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಗಳಾಗಿ ಕ್ಷೇತ್ರ ಸೇರಿದಂತೆ ರಾಜ್ಯದ ವಿವಿಧ ಸಮುದಾಯದಗಳ ಜನರ ಸೇವೆ ಮಾಡಿ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪಕ್ಷವನ್ನು ಬಲವರ್ಧನೆ ಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಅಲ್ಲದೆ ಪಕ್ಷವನ್ನು ತಳ ಮಟ್ಟದಿಂದ ಮೇಲ್ಮಟ್ಟದ ವರೆಗೆ ಕಟ್ಟಿ ಬೆಳಸಿದ್ದಾರೆ. 2023 ರ ವಿಧಾನಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದುಕೊಳ್ಳುವಲ್ಲಿ ಪರಮೇಶ್ವರ್ ಅವರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

ಪರಮೇಶ್ವರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಹೊತ್ತು, ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಹೋಗುವ ಶಕ್ತಿ ಇವರಲ್ಲಿದೆ ಆದ್ದರಿಂದ ಪ್ರಸ್ತುತ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ದೊರೆತ ಹಿನ್ನೆಲೆಯಲ್ಲಿ ಡಾ ಜಿ ಪರಮೇಶ್ವರ್ ಅವರ ಮುಖ್ಯಮಂತ್ರಿ ಆಗಿ ಘೋಷಣೆ ಮಾಡಬೇಕು. ಇದುವರೆಗೂ ಕರ್ನಾಟಕದಲ್ಲಿ ದಲಿತ ಮತಗಳನ್ನು ಆಧರಿಸಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಯಾವೊಬ್ಬ ಮುಖ್ಯಮಂತ್ರಿ ಸ್ಥಾನವನ್ನು ನೀಡಿಲ್ಲ ಆದ್ದರಿಂದ ಡಾ.ಜಿ. ಪರಮೇಶ್ವರ ಈ ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಲೇ ಬೇಕು ಎಂದು ಒತ್ತಾಯಿಸಿದರು.

ಅಲ್ಲದೆ ಪರಮೇಶ್ವರ್ ಅವರು ಶಾಸಕರಾಗಿ,ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷ ಆಡಳಿತ ಸಂದರ್ಭದಲ್ಲಿ ವಿವಿಧ ಇಲಾಖೆಯ ಸಚಿವರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದಾರೆ. ಅಷ್ಟೇ ಅಲ್ಲ ತುಮಕೂರಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಬಡ ಕುಟುಂಬದದವರಿಗೆ ಶಿಕ್ಷಣ ನೀಡುವಲ್ಲಿ ನೆರವಾಗಿದ್ದಾರೆ.

Advertisement

ಈ ಎಲ್ಲಾ ಅಂಶಗಳನ್ನು ಆಧರಿಸಿ ಪ್ರಸ್ತುತ ಬಹುಮತ ಪಡೆದ ಕಾಂಗ್ರೆಸ್ ಪಕ್ಷ ಡಾ.ಜಿ. ಪರಮೇಶ್ವರ್ ಅವರನ್ನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿ ಸೇವೆ ಮಾಡಲು ಅವಕಾಶ ಕೊಡಬೇಕೆಂದು ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಬಳಗ ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರ ಒತ್ತಾಯವಾಗಿದೆ ಎಂದು ಅಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next