ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಪರಿಸರದಲ್ಲಿ ರವಿವಾರ ಬೆಳಗ್ಗೆ ಕೂಡಾ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ಸ್ಥಳೀಯರು ತಿಳಿಸಿದ್ದು ಇದರಿಂದ ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯತ್ ಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಫರಂಗಿಪೇಟೆ ಸಮೀಪದ ಟೆನ್ತ್ ಮೈಲ್ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಚಿರತೆ ಕಂಡ ಬಗ್ಗೆ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ ಫರಂಗಿಪೇಟೆ ಸಮೀಪದ ವಳಚ್ಚಿಲ್ ನಲ್ಲಿ ಚಿರತೆ ಕಂಡು ಬಂದಿತ್ತು ಎಂದು ಹೇಳಲಾಗಿದೆ.
ರವಿವಾರ ಬೆಳಗ್ಗೆ ಫರಂಗಿಪೇಟೆ ಸಮೀಪದ ಟೆನ್ತ್ ಮೈಲ್ ಪಕ್ಕದ ಕುಂಜತ್ಕಲ ಅಂಗನವಾಡಿಯ ಹಿಂಬದಿಯ ಗುಡ್ಡೆಯಲ್ಲಿ ಚಿರತೆ ಕಂಡು ಬಂದಿದೆ ಎಂದು ಸುದ್ದಿ ಪರಿಸರದಲ್ಲಿ ಹರಿದಾಡಿದ್ದು ಇದಿರಂದ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದರು.
ವಿಷಯ ತಿಳಿದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಸದಸ್ಯ ನಝೀರ್ ಟೆನ್ತ್ ಮೈಲ್, ಕಮರುದ್ದೀನ್ ಕರ್ಮಾರ್ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಅಂಗನವಾಡಿ ಹಿಂಬದಿಯ ಗುಡ್ಡೆಯಲ್ಲಿ ಕೆಲವು ಹೊತ್ತು ಹುಡುಕಾಟ ನಡೆಸಿದರು.
ಗ್ರಾಮದ ಟೆನ್ತ್ ಮೈಲ್ ಪರಿಸರದಲ್ಲಿ ಚಿರತೆಯೊಂದು ಓಡಾಡುತ್ತಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಪಿಡಿಒಗೆ ತಿಳಿಸಿದ್ದೇನೆ. ಚಿರತೆ ಕಂಡು ಬಂದಿದೆ ಎಂದು ಹೇಳಲಾದ ಪರಿಸರದ ಜನರು ಜಾಗ್ರತೆ ವಹಿಸುವಂತೆ ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ತಿಳಿಸಿದ್ದಾರೆ.
ಇದನ್ನೂ ಓದಿ : “ಯಶ್ ಅವರೊಂದಿಗೆ ಸಿನಿಮಾ ಮಾಡುವ ಪ್ಲ್ಯಾನ್ ಯಿದೆ..” ಖ್ಯಾತ ನಟ ಕೊಟ್ರು ದೊಡ್ಡ ಸುಳಿವು?