ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ದಲ್ಲಿ ನಡೆದಿದೆ ಎನ್ನಲಾದ, ಅಕ್ರಮ ಗಳ, ಆಪಾದನೆಗಳಿಗೆ ಸಂಬಂಧಿಸಿ ತನಿಖೆ ನಡೆಸಿ, ವರದಿ ಸಲ್ಲಿಸಲು, ಗೃಹ ಇಲಾಖೆ ಎಸ್ ಮುರುಗನ್, ADGP, (communication, logistics and modernization) ಅವರನ್ನು ವಿಚಾರಣಾ ಅಧಿಕಾರಿಯಾಗಿ ನೇಮಿಸಿ ಶನಿವಾರ ಆದೇಶ ಹೊರಡಿಸಿದೆ.
ದೃಶ್ಯ ಮಾಧ್ಯಮಗಳಲ್ಲಿ ಪುಸಾರವಾದ ವಿಡಿಯೋ ಯಾವ ರೀತಿ ಕಾರಾಗೃಹದಲ್ಲಿ ಚಿತ್ರೀಕರಣವಾಯಿತು ಹಾಗೂ ಪುಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳನ್ನು ಗುರುತಿಸಿ , ಪುಕರಣದ ಸತ್ಯಾಸತ್ಯತೆಯ ಬಗ್ಗೆ ತುರ್ತಾಗಿ ಸಮಗ್ರವಾಗಿ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಎಸ್ . ಮುರುಘನ್ , ಐ.ಪಿ.ಎಸ್ . ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದೆ.
ಸಹಾಯಕರಾಗಿ ,ಎಂ. ಸೋಮಶೇಖರ್ , ಕಾರಾಗೃಹಗಳ ಉಪ ಮಹಾನಿರೀಕ್ಷಕರು , ಉತ್ತರ ವಲಯ , ಬೆಳಗಾವಿ ರವರನ್ನು ನೇಮಿಸಿ ಆದೇಶಿಸಲಾಗಿದೆ .
ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಕೇಂದ್ರ ಕಾರಾಗೃಹದ ಆಡಳಿತದ ವಿರುದ್ಧ ಸುದ್ದಿ ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ , ತಪ್ಪಿತಸ್ಥ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಗುರುತಿಸಿ ಕೂಲಂಕಷವಾಗಿ ವಿಚಾರಣೆ ನಡೆಸಿ ತುರ್ತಾಗಿ ವರದಿ ಸಲ್ಲಿಸಲು ಉತ್ತರ ವಲಯದ ಕಾರಾಗೃಹಗಳ ಉಪಮಹಾನಿರೀಕ್ಷಕರಿಗೆ ಸೂಚಿಸಲಾಗಿತ್ತು.
ಗೃಹ ಸಚಿವರ ಅಧ್ಯಕ್ಷತೆಯಲ್ಲಿ , ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು , ಒಳಾಡಳಿತ ಇಲಾಖೆ , ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು , ಒಳಾಡಳಿತ ಇಲಾಖೆ , ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು , ಕರ್ನಾಟಕ ರಾಜ್ಯ ಹಾಗೂ ಪೊಲೀಸ್ ಮಹಾನಿರ್ದೇಶಕರು , ಕಾರಾಗೃಹ ಮತ್ತು ಸುಧಾರಣಾ ಸೇವ ಅವರೊಂದಿಗೆ ಚರ್ಚಿಸಿ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳಿಂದ ಉನ್ನತ ಮಟ್ಟದ ವಿಚಾರಣೆಯನ್ನು ನಡೆಸಲು ತೀರ್ಮಾನಿಸಲಾಗಿದೆ.
ವಿಚಾರಣಾಧಿಕಾರಿಗಳು ಅಂತಿಮ ವರದಿಯನ್ನು ಹಾಗೂ ವಿಚಾರಣೆಯ ಪುಗತಿಯ ಪ್ರತಿಯೊಂದು ಹಂತದ ಬಗ್ಗೆ ಮಾಹಿತಿಯನ್ನು ಕಾಲಕಾಲಕ್ಕೆ ಪೊಲೀಸ್ ಮಹಾನಿರ್ದೇಶಕರು , ಕಾರಾಗೃಹ ಮತ್ತು ಸುಧಾರಣಾ ಸೇವೆ ರವರಿಗೆ ನೇರವಾಗಿ ಕಳುಹಿಸಲು ಸೂಚಿಸಲಾಗಿದೆ.