Advertisement

ಪೋಷಕರು ಕಾನ್ವೆಂಟ್‌ ಮೋಹ ತ್ಯಜಿಸಿ

09:16 PM Feb 29, 2020 | Lakshmi GovindaRaj |

ಮೈಸೂರು: ಪೋಷಕರು ಯಾವುದೇ ಸೌಲಭ್ಯ ಸಿಗದ ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು, ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಬೇಕು ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Advertisement

ಮೈಸೂರು ತಾಲೂಕು ಡಿ.ಸಾಲುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತುಕೊಟ್ಟು ಬಿಸಿಯೂಟ, ಸಮವಸ್ತ್ರ, ಶೂ, ಸೈಕಲ್‌, ಹಾಲು ಎಲ್ಲವನ್ನು ನೀಡುತ್ತಿದ್ದು, ಮಕ್ಕಳು ಇದರ ಸದುಪಯೋಗಪಡೆದುಕೊಂಡು ವಿದ್ಯಾವಂತರಾಗಿ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಬೇಕು.

ಸರ್ಕಾರಿ ಶಾಲೆಗಳಲ್ಲಿಯೂ ನುರಿತ ಶಿಕ್ಷಕರಿದ್ದು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ಗ್ರಾಮೀಣ ಭಾಗದ ಶಾಲೆಗಳಲ್ಲಿ ಹೆಚ್ಚಾಗಿ ಹಿಂದುಳಿದ ವರ್ಗಗಳ ಮಕ್ಕಳೇ ವ್ಯಾಸಂಗ ಮಾಡುತ್ತಿದ್ದು, ಶಿಕ್ಷಕರು ಹೆಚ್ಚಿನ ಗಮನ ಹರಿಸಿ ಉತ್ತಮ ಫ‌ಲಿತಾಂಶ ಬರುವಂತೆ ಪ್ರಯತ್ನಿಸಬೇಕು ಎಂದರು.

ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ, ಜಿಪಂ ಸದಸ್ಯ ಬೀರಿಹುಂಡಿ ಬಸವಣ್ಣ, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಬಿಇಒ ಕೃಷ್ಣ, ತಾಪಂ ಸದಸ್ಯ ಸಿ.ಎಂ.ಸಿದ್ದರಾಮೇಗೌಡ, ಗ್ರಾಪಂ ಅಧ್ಯಕ್ಷ ಬಸವರಾಜು, ಮಾಜಿ ಅಧ್ಯಕ್ಷ ಮಾಕಿ ಮಹಾದೇವು, ಚಂದ್ರು, ಹುಚ್ಚೇಗೌಡ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next