ಮಹಾನಗರ: ಶಿಕ್ಷಣ ಎಂದರೆ ಅದು ನಾಲ್ಕು ಗೋಡೆಗಳ ಮಧ್ಯೆ ನಡೆ ಯುವ ಪ್ರವಚನವಲ್ಲ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಇರುವಂತಹ ವ್ಯವಸ್ಥೆಯಾಗಿದೆ. ಇಲ್ಲಿ ಶಿಕ್ಷಣ ಸಂಸ್ಥೆ ಹಾಗೂ ಹೆತ್ತವರ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ರಾಮಕೃಷ್ಣ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ| ಎಂ. ಬಾಲಕೃಷ್ಣ ಶೆಟ್ಟಿ ಹೇಳಿದರು.
ನಗರದ ನಂತೂರಿನ ಡಾ| ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜು ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾ ರ್ಥಿಗಳು ಪದವಿಪೂರ್ವ ಕಾಲೇಜು ಹಂತ ದಲ್ಲಿ ಕಷ್ಟಪಟ್ಟು ಶ್ರದ್ಧೆಯಿಂದ ಎರಡು ವರ್ಷ ವಿದ್ಯಾ ಭ್ಯಾಸ ಮಾಡಿದರೆ ಜೀವನ ಪೂರ್ತಿ ಸುಖ ಜೀವನವನ್ನು ಅನುಭವಿಸಲು ಸಾಧ್ಯವಾಗುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವನ್ನು ಹೆತ್ತವರು, ಶಿಕ್ಷಣ ಸಂಸ್ಥೆಗಳು ಒದಗಿಸಿಕೊಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ನವೀನ್ ಶೆಟ್ಟಿ ಕೆ. ಮಾತನಾಡಿ, ಜೀವನದಲ್ಲಿ ಯಾರು ಸಂತೋಷದಿಂದ ಇರುತ್ತಾರೊ ಅವರು ಯಶಸ್ಸನ್ನು ಪಡೆಯುತ್ತಾರೆ. ನಾವು ಮಾಡುವ ಕೆಲಸವನ್ನು ಇಷ್ಟ ಪಟ್ಟರೆ ಸಂತೋಷ, ಯಶಸ್ಸು ಸಾಧ್ಯವಾಗುವುದು. ವಿದ್ಯಾರ್ಥಿಗಳು ಪೋಷಕರ ಒತ್ತಡಕ್ಕೆ ಮಣಿಯದೆ ತಮಗಿಷ್ಟವಾದ ವಿಷಯ ವನ್ನು ಆಯ್ಕೆ ಮಾಡಿ, ಶ್ರದ್ಧೆ, ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದಾಗ ಗರಿಷ್ಠ ಫಲಿತಾಂಶದೊಂದಿಗೆ ಯಶಸ್ಸು ಪಡೆಯಲು ಸಾಧ್ಯ ಎಂದರು.
ಉಪನ್ಯಾಸಕಿ ಸಂಗೀತ ಶೆಟ್ಟಿ ಅತಿಥಿ ಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಪುಷ್ಪಾಂಜಲಿ ಸಂಸ್ಥೆಯ ನೀತಿ ನಿಯಮಗಳನ್ನು ವಾಚಿಸಿದರು.
ಉಪಪ್ರಾಂಶುಪಾಲರಾದ ಅನ್ನಪೂರ್ಣಾ ಅವರು ಸ್ವಾಗತಿಸಿದರು. ಉಪನ್ಯಾಸಕಿ ಗೀತಾ ವಂದಿಸಿದರು. ವಿದ್ಯಾರ್ಥಿ ರಜತ್ ನಿರೂಪಿಸಿದರು.