Advertisement

Bengaluru; ಪೋಷಕರಿಗೆ ಶಾಲೆಗಳಲ್ಲಿ ಭದ್ರತೆಯ ಖಾತರಿ ನೀಡಬೇಕು: ಎಚ್ ಡಿ ಕುಮಾರಸ್ವಾಮಿ

12:46 PM Dec 01, 2023 | Team Udayavani |

ಬೆಂಗಳೂರು: ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Advertisement

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು. ರಾಜ್ಯ ಕಾಂಗ್ರೆಸ್ ಸರಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದಿದ್ದಾರೆ.

ಇದನ್ನೂ ಓದಿ:INDIA A; ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯದ ವಿಕೆಟ್ ಕೀಪರ್’ಗೆ ಎ ತಂಡ ನಾಯಕತ್ವ

ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರಕಾರ ಮೀನಾಮೇಷ ಎಣಿಸಬಾರದು ಎಂದು ಕುಮಾರಸ್ವಾಮಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next