Advertisement
ಅವರು ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕೆರೆಯಲ್ಲಿ ಐಕ್ಯೂಎಸಿ ಹಾಗೂ ಆಪ್ತ ಸಮಾಲೋಚನೆ ಸಮಿತಿ ಮತ್ತು ರಕ್ಷಕ – ಶಿಕ್ಷಕ ಸಂಘದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರಿಗಾಗಿ ಆಪ್ತ ಸಲಹೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು. ಕಾಲೇಜು ಪ್ರಾಂಶು ಪಾಲ ನಿತ್ಯಾನಂದ ವಿ. ಗಾಂವ್ಕರ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ನಡತೆ ಮತ್ತು ಭವಿಷ್ಯ ರೂಪಿಸುವಲ್ಲಿ ಆಪ್ತ ಸಲಹೆಯ ಆವಶ್ಯಕತೆಯಿದ್ದು ಇಂತಹ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಇಂದಿನ ಯುವಜನಾಂಗ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿರುವ ವೇಗ ಹಾಗೂ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ. ನೆಗೆಟಿವ್ ಚಿಂತನೆಗಳು, ಅವಕಾಶಗಳ ಅಸಮರ್ಪಕ ಬಳಕೆ ಹಾಗೂ ಮಕ್ಕಳು ಮಾದಕ ವ್ಯಸನಿಗಳಾಗಿ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿರುವುದು ಕಳವಳಕಾರಿ ಅಂಶವಾಗಿದೆ ಎಂದು ಡಾ| ವಿರೂಪಾಕ್ಷ ದೇವರುಮನೆ ಕಳವಳ ವ್ಯಕ್ತಪಡಿಸಿದರು.