Advertisement

ಪರೇಶ್‌ ಮೇಸ್ತಾ ಹತ್ಯೆ ಸಂಸತ್ತಲ್ಲಿ ಪ್ರಸ್ತಾಪ

07:30 AM Dec 22, 2017 | Team Udayavani |

ಬೆಂಗಳೂರು: ಹೊನ್ನಾವರದಲ್ಲಿ ನಡೆದಿದ್ದ ಪರೇಶ್‌ ಮೇಸ್ತಾ ಹತ್ಯೆ ಪ್ರಕರಣ ಸಂಸತ್‌ನಲ್ಲೂ ಪ್ರತಿಧ್ವನಿಸಿದ್ದು, ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

Advertisement

ಸಾರ್ವಜನಿಕ ಮಹತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಕೊಲೆಯಾಗುತ್ತಿದೆ. ಈ ಪೈಕಿ ಬೆಂಗಳೂರಿನ ರುದ್ರೇಶ್‌ ಮತ್ತು ದಕ್ಷಿಣ ಕನ್ನಡದ ಶರತ್‌ ಮಡಿವಾಳ ಹತ್ಯೆ ಪ್ರಕರಣಗಲ್ಲಿ ಪಿಎಫ್ಐ ಸಂಘಟನೆ ಕೈವಾಡ ಇರುವುದು ಬೆಳಕಿಗೆ ಬಂದಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪಿಎಫ್ಐ ಮತ್ತು ಎಸ್‌ಡಿಪಿಐನಂತಹ ಮೂಲಭೂತವಾದಿ ಸಂಘಟನೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಹಾದಿ ಸಂಘಟನೆಯಾದ ಐಸಿಸ್‌ ಜತೆ ಸಂಪರ್ಕ ಹೊಂದಿರುವ ಮಾಹಿತಿಯಿದೆ. ಆದರೆ, ಕರ್ನಾಟಕ ಸರ್ಕಾರ ಈ ಸಂಘಟನೆಗಳಿಗೆ ಪ್ರೋತ್ಸಾಹ ನೀಡುತ್ತಾ ಬೆಂಗಳೂರಿನ ಅರಮನೆ ಮೈದಾನ ಮತ್ತು ಮಂಗಳೂರಿನಲ್ಲಿ ಸಮಾವೇಶ ನಡೆಸಲು ಅವಕಾಶ ಮಾಡಿಕೊಡುತ್ತಿದೆ. ಈ ಮಧ್ಯೆ ಹೊನ್ನಾವರದಲ್ಲಿ ಡಿ. 6ರಂದು ಪರೇಶ್‌ ಮೇಸ್ತಾ ಎಂಬಾತನನ್ನು ಬರ್ಭರವಾಗಿ ಹತ್ಯೆ ಮಾಡಲಾಗಿದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಮತ್ತು ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳ ಮೇಲೆ ನಿಗಾ ಇಡಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next