ಬಹಾಮಾಸ್: ಪ್ಯಾರಿಸ್ ಒಲಿಂಪಿಕ್ಸ್ ನ ಅರ್ಹತಾ ಸುತ್ತಿನಲ್ಲಿ ಭಾರತದ ಪುರುಷ ಮತ್ತು ಮಹಿಳೆಯರ 4×400 ಮೀಟರ್ ರಿಲೇ ತಂಡಗಳು ಎರಡನೇ ಸ್ಥಾನ ಪಡೆಯುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆಯನ್ನು ಪಡೆದುಕೊಂಡಿವೆ.
ಅದರಂತೆ ಮಹಿಳೆಯರ ತಂಡದ ರೂಪಲ್ ಚೌಧರಿ, ಎಂ ಆರ್ ಪೂವಮ್ಮ, ಜ್ಯೋತಿಕಾ ಶ್ರೀ ದಂಡಿ ಮತ್ತು ಶುಭಾ ವೆಂಕಟೇಶನ್ ಅವರು 3 ನಿಮಿಷ ಮತ್ತು 29.35 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಎರಡನೇ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡಿತು. ಮೊದಲ ಸ್ಥಾನದಲ್ಲಿ ಜಮೈಕಾ ತಂಡ 3:28.54 ನಿಮಿಷಗಳಲ್ಲಿ ಗುರಿ ತಲುಪಿ ಮೊದಲ ಸ್ಥಾನವನ್ನು ಪಡೆದುಕೊಂಡಿತ್ತು.
ಇದರ ಜೊತೆಗೆ ಮುಹಮ್ಮದ್ ಅನಾಸ್ ಯಾಹಿಯಾ, ಮುಹಮ್ಮದ್ ಅಜ್ಮಲ್, ಅರೋಕಿಯಾ ರಾಜೀವ್ ಮತ್ತು ಅಮೋಜ್ ಜಾಕೋಬ್ ಅವರ ತಂಡ ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡರು.
ಜಾವೆಲಿನ್ ಥ್ರೋ ಚಾಂಪಿಯನ್ ನೀರಜ್ ಚೋಪ್ರಾ ಸೇರಿದಂತೆ ಭಾರತದ 19 ಟ್ರ್ಯಾಕ್ ಮತ್ತು ಫೀಲ್ಡ್ ಆಟಗಾರರು ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಅಥ್ಲೆಟಿಕ್ಸ್ ಸ್ಪರ್ಧೆಗಳು ಆಗಸ್ಟ್ 1 ರಿಂದ ಪ್ರಾರಂಭವಾಗಲಿವೆ.