Advertisement

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

12:10 AM Aug 14, 2024 | Team Udayavani |

ಪ್ಯಾರಿಸ್‌: 2036 ಒಲಿಂಪಿಕ್ಸ್‌ ಕ್ರೀಡಾಕೂಟ ವನ್ನು ಭಾರತ ಆಯೋಜಿಸಬಲ್ಲದು ಎಂದು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನ್ಯುಯೆಲ್‌ ಮ್ಯಾಕ್ರನ್‌ ಹೇಳಿದ್ದಾರೆ.

Advertisement

2036ರ ಒಲಿಂಪಿಕ್ಸ್‌ ಆತಿಥ್ಯಕ್ಕೆ ಬಿಡ್‌ ಸಲ್ಲಿಸಲು ಭಾರತ ಮುಂದಾಗಿದೆ. ಇದೇ ವಿಚಾರವಾಗಿ ಮಾತನಾಡಿರುವ ಮ್ಯಾಕ್ರನ್‌, ಭಾರತಕ್ಕೆ ಒಲಿಂಪಿಕ್ಸ್‌ನಂಥ ಜಾಗತಿಕ ಕ್ರೀಡಾಕೂಟವನ್ನು ಆಯೋಜಿಸುವ ಸಾಮರ್ಥ್ಯವಿದೆ ಎಂದಿದ್ದಾರೆ.

ಸಂದರ್ಶನವೊಂದರಲ್ಲಿ ಭಾರತದ ಬಗ್ಗೆ ಮಾತನಾಡಿ ರುವ ಇಮ್ಯಾನ್ಯುಯೆಲ್‌ ಮ್ಯಾಕ್ರನ್‌, “ಎಲ್ಲದಕ್ಕಿಂತ ಹೆಚ್ಚಾಗಿ ನಿಮ್ಮ ದೇಶ, ನಿಮ್ಮ ದೇಶದ ಭವಿಷ್ಯದ ಬಗ್ಗೆ ನನಗೆ ಬಲವಾದ ನಂಬಿಕೆಯಿದೆ. ಅಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯ ನಿಮ್ಮಲ್ಲಿದೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.