Advertisement

Paris Olympics: ಬ್ಯಾಡ್ಮಿಂಟನ್‌ ಆಟಗಾರ ಲಕ್ಷ್ಯಸೇನ್‌ ಸಾಧನೆ ಶ್ಲಾಘಿಸಿದ ಧಾಮಿ

12:34 AM Aug 19, 2024 | Team Udayavani |

ಡೆಹ್ರಾಡೂನ್‌: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ಸಿಂಗ್‌ ಧಾಮಿ ಅವರು ರವಿವಾರ ಇಲ್ಲಿ ಭಾರತದ ಬ್ಯಾಡ್ಮಿಂಟನ್‌ ಆಟಗಾರ ಲಕ್ಷ್ಯ ಸೇನ್‌ ಅವರನ್ನು ಭೇಟಿ ಮಾಡಿ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಅವರ ಸಾಧನೆಯನ್ನು ಶ್ಲಾಘಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಧಾಮಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸೇನ್‌ ಅವರು ತನ್ನ ತಾಯಿ ನಿರ್ಮಲಾ ಸೇನ್‌ ಮತ್ತು ತಂದೆ ಡಿ. ಕೆ. ಸೇನ್‌ ಜತೆಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಧಾಮಿ ಅವರು ಸೇನ್‌ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಅಲ್ಮೋರಾ ಜಿಲ್ಲೆಯ 23 ವರ್ಷದ ಸೇನ್‌, ಪ್ಯಾರಿಸ್‌ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್‌ ಪುರುಷರ ಸಿಂಗಲ್ಸ್‌ ವಿಭಾಗದ ಸೆಮಿಫೈನಲ್‌ ತಲುಪಿದ್ದರು. ಆದರೆ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಮಲೇಷ್ಯಾದ ಲೀ ಜಿ ಜಿಯಾ ವಿರುದ್ಧ ಸೋತು ಪದಕ ಗೆಲ್ಲಲು ವಿಫ‌ಲರಾದರು.

Advertisement

Udayavani is now on Telegram. Click here to join our channel and stay updated with the latest news.

Next