Advertisement

Paris Olympics: ಹುದ್ದೆ ತ್ಯಜಿಸಿದ ಮೇರಿಕಾಮ್‌

12:57 AM Apr 13, 2024 | Team Udayavani |

ಹೊಸದಿಲ್ಲಿ: ಆರು ಬಾರಿಯ ವಿಶ್ವ ಚಾಂಪಿಯನ್‌ ಬಾಕ್ಸರ್‌ ಎಂಸಿ ಮೇರಿಕಾಮ್‌ ಅವರು ಮುಂಬರುವ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತೀಯ ದಂಡಿನ ಮುಖ್ಯಸ್ಥ ಹುದ್ದೆಯನ್ನು ತ್ಯಜಿಸಿದ್ದಾರೆ. ವೈಯಕ್ತಿ ಕಾರಣಗಳನ್ನು ನೀಡಿ ಅವರು ಹುದ್ದೆಯಿಂದ ಹಿಂದೆ ಸರಿದಿದ್ದಾರೆ.

Advertisement

ಮುಖ್ಯಸ್ಥ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಮೇರಿ ಕಾಮ್‌ ಅವರು ಭಾರತೀಯ ಒಲಿಂಪಿಕ್‌ ಅಸೋಸಿಯೇಶನ್‌ (ಐಒಎ)ಗೆ ಪತ್ರ ಬರೆದಿದ್ದರು ಎಂದು ಐಒಎ ಅಧ್ಯಕ್ಷೆ ಪಿ.ಟಿ. ಉಷಾ ಅವರು ತಿಳಿಸಿದರು.

ನನ್ನ ದೇಶಕ್ಕೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸೇವೆ ಸಲ್ಲಿಸುವುದು ಗೌರವವೆಂದು ನಾನು ಪರಿಗಣಿಸುತ್ತೇನೆ ಮತ್ತು ಇದಕ್ಕೆ ಮಾನಸಿಕವಾಗಿ ಸಿದ್ಧನಾಗಿದ್ದೆ. ಆದರೆ ವೈಯಕ್ತಿಕ ಕಾರಣಗಳಿಗಾಗಿ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಮೇರಿಕಾಮ್‌ ಪತ್ರದಲ್ಲಿ ತಿಳಿಸಿದ್ದರು ಎಂದು ಉಷಾ ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next