Advertisement

Karnataka: ಪರಿಷತ್‌ ಚುನಾವಣೆ: ಆಪರೇಷನ್‌ ಹಸ್ತದ ವ್ಯಕ್ತಿಗಳೇ ಕಾಂಗ್ರೆಸ್‌ ಅಭ್ಯರ್ಥಿಗಳು

10:24 PM Sep 08, 2023 | Team Udayavani |

ಬೆಂಗಳೂರು: ವಿಧಾನ ಪರಿಷತ್ತಿನ ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಈ ಬಾರಿ ಮೂರು ಕ್ಷೇತ್ರಗಳಿಗೆ “ಆಪರೇಷನ್‌ ಹಸ್ತ’ಕ್ಕೆ ಒಳಗಾದವರೇ ಕಾಂಗ್ರೆಸ್‌ ಅಭ್ಯರ್ಥಿಗಳಾಗುವುದು ಬಹುತೇಕ ಖಚಿತವಾಗಿದೆ.

Advertisement

ಬಿಜೆಪಿಯಿಂದ ಕಾಂಗ್ರೆಸ್‌ ಸೇರಿ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಪುಟ್ಟಣ್ಣ, ಜೆಡಿಎಸ್‌ನಿಂದ ಕಾಂಗ್ರೆಸ್‌ ಸೇರಿರುವ ಆಯನೂರು ಮಂಜುನಾಥ್‌ ಹಾಗೂ ಕಾಂಗ್ರೆಸ್‌ ಕಡೆಗೆ ಮುಖ ಮಾಡಿರುವ ಜೆಡಿಎಸ್‌ನ ಮರಿತಿಬ್ಬೇಗೌಡರಿಗೆ ಪರಿಷತ್ತು ಚುನಾವಣೆಯಲ್ಲಿ ಕಾಂಗ್ರೆಸ್‌ ಮಣೆ ಹಾಕುವ ಸಾಧ್ಯತೆ ಇದೆ.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ವಿಧಾನ ಪರಿಷತ್ತಿನ ಟಿಕೆಟ್‌ ಆಕಾಂಕ್ಷಿಗಳ ಸಭೆಯಲ್ಲಿ ಈ ಮೂವರ ಹೆಸರು ಮುಂಚೂಣಿಯಲ್ಲಿದ್ದು, ಬಹುತೇಕ ಅಂತಿಮಗೊಂಡಿದೆ. ಅದರಂತೆ ಬೆಂಗಳೂರು ಶಿಕ್ಷಕ ಕ್ಷೇತ್ರದಿಂದ ಪುಟ್ಟಣ್ಣ, ನೈಋತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್‌ ಮತ್ತು ದಕ್ಷಿಣ ಶಿಕ್ಷಕ ಕ್ಷೇತ್ರದಿಂದ ಮರಿತಿಬ್ಬೇಗೌಡ ಕಣಕ್ಕಿಳಿಯುವ ನಿರೀಕ್ಷೆಯಿದೆ.
ಪುಟ್ಟಣ್ಣ ಮತ್ತು ಆಯನೂರು ಮಂಜುನಾಥ್‌ ಕಳೆದ ಬಾರಿ ಬಿಜೆಪಿಯಿಂದ ಗೆದ್ದಿದ್ದರು. ಬಳಿಕ ಕಾಂಗ್ರೆಸ್‌ ಸೇರಿದ್ದ ಪುಟ್ಟಣ್ಣ ರಾಜಾಜಿನಗರದಿಂದ ವಿಧಾನನಭೆಗೆ ಸ್ಪರ್ಧಿಸಿದ್ದರು. ಆಯನೂರು ಮಂಜುನಾಥ್‌ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋತಿದ್ದರು.

ಒಟ್ಟು ಏಳು ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳಿದ್ದು, 2024ರ ಜೂನ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next