Advertisement
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ 2022ರಲ್ಲಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಮೇಲ್ಮನೆಯಲ್ಲಿ ವಿಪಕ್ಷದ ನಾಯಕರೂ ಆಗಿದ್ದರು. 2028ರ ಜ. 5ರ ವರೆಗೆ ಅವಧಿ ಇತ್ತಾದರೂ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವ ಸಲುವಾಗಿ 2024ರ ಜೂ. 15 ರಂದು ಮೇಲ್ಮನೆಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.
ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಹಲವು ಹೆಸರು ಕಾಂಗ್ರೆಸ್‌ನಿಂದ ಹರಿದಾಡುತ್ತಿವೆ. ಸೊರಕೆ ಅವರು ಕೆಪಿಸಿಸಿ ಪ್ರಚಾರ ಸಮಿತಿ ಜವಾಬ್ದಾರಿ ನಿರ್ವಹಿಸುತ್ತಿದ್ದು, ಜಯಪ್ರಕಾಶ್ ಹೆಗ್ಡೆ ಸ್ಪರ್ಧೆಯ ಬಗ್ಗೆ ಆಸಕ್ತಿ ತೋರಿಲ್ಲ. ಇನ್ನೂ ಕೆಲವರು ಅರ್ಜಿ ಸಲ್ಲಿಸಿದ್ದು, ಸ್ಥಳೀಯ ಸಂಸ್ಥೆಯಿಂದ ಸ್ಪರ್ಧೆಯ ಬಗ್ಗೆ ಹಲವರು ಅನಾಸಕ್ತಿ ತೋರಿದ್ದಾರೆ.
Related Articles
ಬಿಜೆಪಿಯ ಭದ್ರಕೋಟೆಯಂತಿರುವ ಕ್ಷೇತ್ರದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಪ್ರಮೋದ್ ಮಧ್ವರಾಜ್, ಕಿದಿಯೂರು ಉದಯ ಕುಮಾರ್ ಶೆಟ್ಟಿ, ಸತೀಶ್ ಕುಂಪಲ ಸೇರಿದಂತೆ 8 ಹೆಸರುಗಳು ಬಿಜೆಪಿಯಿಂದ ಮುಂಚೂಣಿಯಲ್ಲಿದ್ದು, ಬಸವರಾಜ ಬೊಮ್ಮಾಯಿ ಹಾಗೂ ಪ್ರೀತಂ ಗೌಡ ಕ್ಷೇತ್ರ ಪ್ರವಾಸ ಮಾಡಿ ಅಭಿಪ್ರಾಯ ಸಂಗ್ರಹಿಸಿ, 8 ಹೆಸರುಗಳನ್ನು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ ಸಲ್ಲಿಸಿದ್ದಾರೆ.
Advertisement
ಕೇಂದ್ರ ಚುನಾವಣ ಸಮಿತಿಯಿಂದ ಹೆಸರು ಅಂತಿಮಗೊಳ್ಳುವುದು ಬಾಕಿ ಇದೆ.