Advertisement

Parkala ಕಾರು ಡಿವೈಡರ್‌ಗೆ ಢಿಕ್ಕಿ: ಜಖಂ

11:49 PM Jul 14, 2024 | Team Udayavani |

ಉಡುಪಿ: ಪರ್ಕಳದ ಬಿಎಂ ಶಾಲೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಘಟನೆ ರವಿವಾರ ಸಂಜೆ ವೇಳೆ ನಡೆದಿದೆ.

Advertisement

ಮಣಿಪಾಲದಿಂದ ಪರ್ಕಳದತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಹೊಡೆದು ಅನಂತರ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಒಂದು ಭಾಗ ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ರಸ್ತೆಯಲ್ಲಿ ನೀರು ನಿಂತಿದ್ದ ಕಾರಣ ಕಾರು ನಿಯಂತ್ರಣ ತಪ್ಪಿದೆ. ಘಟನೆ ನಡೆದ ವೇಳೆ ಕೆಲ ಹೊತ್ತು ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾಯಿತು.

ಮಣಿಪಾಲ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಯಾವುದೇ ದೂರು ದಾಖಲಾಗಿಲ್ಲ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next