Advertisement

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

10:36 AM Jun 30, 2024 | Team Udayavani |

ಪರ್ಕಳ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರುಗಡೆಯಲ್ಲಿ ನಿರ್ಮಾಣವಾಗುತ್ತಿರುವ ಕೆರೆ ಈ ಬಾರಿಯೂ ಮೊದಲ ಮಳೆಗೆಯೇ ಕುಸಿದಿದ್ದು ಉಡುಪಿಯ ಜಿಲ್ಲಾಧಿಕಾರಿ ವಿದ್ಯಾ ಕುಮಾರಿಯವರು ಭೇಟಿ ನೀಡಿ ಪರಿಶೀಲಿಸಿದರು.

Advertisement

ಸಣ್ಣ ನೀರಾವರಿ ಇಲಾಖೆಯಿಂದ ಬಹುಕೋಟಿ ಅನುದಾನದಿಂದ ನಿರ್ಮಾಣವಾಗುತ್ತಿದ್ದು, ಈಗ ನಾಲ್ಕನೇ ಬಾರಿಯೂ ಕೆರೆದಂಡೆ ಕುಸಿದಿದೆ. ಅವೈಜ್ಞಾನಿಕದ ವಿನ್ಯಾಸ ಹಾಗೂ ಕಳಪೆ ಗುಣಮಟ್ಟದ ಕಾಮಗಾರಿಯ ಇದಕ್ಕೆ ಕಾರಣ ಎನ್ನಲಾಗಿದೆ. ಕೆರೆಯ ಅಕ್ಕಪಕ್ಕದಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ತೋಡು ನಿರ್ಮಾಣ ಮಾಡದೆ ಇರುವುದು, ಈ ಬಾರಿ ಕೆರೆಯ ಪಕ್ಕದಲ್ಲಿ ಯಥೇಚ್ಛವಾಗಿ ಸುತ್ತಲ ಶೇಡಿಮಣ್ಣನ್ನು ತೆಗೆದಿರುವುದು ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸ್ಥಳೀಯರು ಕಳಪೆ ಕಾಮಗಾರಿಯ ಬಗ್ಗೆ ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದ್ದಾರೆ. ಕೆರೆಯ ಈ ರೀತಿಯ ದಂಡೆ ಕುಸಿಯಲು ಸುತ್ತಮುತ್ತದ ಮರ ಹಾಗೂ ಪಕ್ಕದಲ್ಲಿರುವ ಮಣ್ಣು ಅಗೆದು ಬೇರಡೆ ಸಾಗಾಟವೇ ಮೂಲ ಕಾರಣವೆಂದು ದೂರಿದ್ದಾರೆ.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಜೊತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next