ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನವನ್ನು ಉದ್ಘಾಟಿಸಲು ಅಥವಾ ಸಮಾರಂಭಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕಿಡಿ ಕಾರಿದ್ದಾರೆ.
ಸಂಸತ್ತನ್ನು ಅಹಂಕಾರದ ಇಟ್ಟಿಗೆಗಳಿಂದ ನಿರ್ಮಿಸಲಾಗಿಲ್ಲ, ಸಾಂವಿಧಾನಿಕ ಮೌಲ್ಯಗಳ ಮೂಲಕ ನಿರ್ಮಿಸಲಾಗಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್, ಎಡ, ಎಎಪಿ ಮತ್ತು ಟಿಎಂಸಿ ಸೇರಿದಂತೆ 19 ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿರುವ ಹೊಸ ಸಂಸತ್ತಿನ ಸಂಕೀರ್ಣದ ಉದ್ಘಾಟನೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಘೋಷಿಸಿದ ನಂತರ, ಪ್ರಜಾಪ್ರಭುತ್ವದ ಆತ್ಮವಾಗಿರುವ ಹೊಸ ಕಟ್ಟಡದಲ್ಲಿ ಯಾವುದೇ ಮೌಲ್ಯವನ್ನು ಕಾಣುವುದಿಲ್ಲ ಎಂದು ಹೇಳಿದ್ದಾರೆ.