Advertisement
ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿಕೊಂಡಿದ್ದಾನೆ ಎಂಬ ವಿಚಾರ ಸಾಬೀತಾದರೆ ಮಾತ್ರ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಂಥವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬಾರದು ಎಂದು ತಿದ್ದುಪಡಿ ಮಾಡಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸೂಚಿಸಿದ್ದ ತಿದ್ದುಪಡಿಗಳನ್ನು ಲೋಕಸಭೆ ತಿರಸ್ಕರಿಸಿದೆ. ಒಂದು ವೇಳೆ ಮಹಿಳೆ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದರೆ ಆಕೆಯ ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಸಲಹೆ ಮಾಡಲಾಗಿದೆ. 1987ರ ಕಾಯ್ದೆ ಸಾಂಸ್ಥಿಕವಾಗಿತ್ತು. ತಿದ್ದುಪಡಿ ಕಾಯ್ದೆಯಲ್ಲಿ ಸಮುದಾಯವನ್ನು ಕೇಂದ್ರೀಕರಿಸಿ ರೂಪಿಸಲಾಗಿದೆ. ಎಲ್ಲರನ್ನೂ ಒಳಗೊಂಡಂತೆ ಕಾನೂನು ರೂಪಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ತಿದ್ದುಪಡಿ ವಿಧೇಯಕದಲ್ಲಿ ಸಮಸ್ಯೆಗೆ ಒಳಗಾದ ವ್ಯಕ್ತಿ ತನಗೆ ಯಾವ ರೀತಿಯ ಚಿಕಿತ್ಸೆ ಬೇಕು, ತನ್ನ ವ್ಯವಹಾರಗಳನ್ನು ಗಮನಿಸಲು ಪ್ರತಿನಿಧಿಯನ್ನು ನೇಮಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. Advertisement
ಮಾನಸಿಕ ಆರೋಗ್ಯ ವಿಧೇಯಕ ಪಾಸ್
11:40 AM Mar 28, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.