ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಂದು ಪ್ರಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಆಗಸ್ಟ್ 9ರವರೆಗೆ ಅಧಿವೇಶನ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಸತ್ತಿನ ಮುಂಗಾರು ಅಧಿವೇಶನದ ದಿನಾಂಕ ಬಹುತೇಕ ಅಂತಿಮಗೊಂಡಿದೆ. ಮೋದಿ ಸರ್ಕಾರದ 3.0 ರ ಮುಂಗಾರು ಅಧಿವೇಶನ ಜುಲೈ 22 ರಿಂದ ಆಗಸ್ಟ್ 9 ರವರೆಗೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಅಧಿವೇಶನವು ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ, ದೃಢೀಕರಣ, ಸ್ಪೀಕರ್ ಆಯ್ಕೆ, ಅಧ್ಯಕ್ಷರ ಭಾಷಣ ಮತ್ತು ನಂತರದ ಚರ್ಚೆಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಿಂದ ಜುಲೈ 3 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಜುಲೈ 22 ರಂದು ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು ಇದೆ ಸಮಯದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮೋದಿ ಸರ್ಕಾರದ 3.0 ಬಜೆಟ್ ಅನ್ನು ಮಂಡಿಸಲಿದ್ದಾರೆ ಎಂದು ಹೇಳಲಾಗಿದ್ದು ಆದರೆ, ಬಜೆಟ್ ದಿನಾಂಕದ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಜೂನ್ 12 ರಂದು ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ನಿರ್ಮಲಾ ಸೀತಾರಾಮನ್ ಕೂಡ ಹೊಸ ದಾಖಲೆ ನಿರ್ಮಿಸಲಿದ್ದಾರೆ ಎನ್ನಲಾಗಿದ್ದು. ಇಲ್ಲಿಯವರೆಗೆ ಅವರು 5 ಪೂರ್ಣ ಬಜೆಟ್ ಮತ್ತು 1 ಮಧ್ಯಂತರ ಬಜೆಟ್ ಮಂಡಿಸಿದ್ದಾರೆ.
ಇದನ್ನೂ ಓದಿ: Renukaswamy Case: ಸ್ಥಳ ಮಹಜರು ವೇಳೆ ಕಿಡ್ನಾಪ್ ಮಾಡಿದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಆರೋಪಿ