Advertisement
ಸೆ.14ರಂದು ಆರಂಭವಾಗಲಿರುವ ಅಧಿವೇಶನ ಒಂದು ದಿನವೂ ವಿರಾಮ ತೆಗೆದುಕೊಳ್ಳದೆ ಅಕ್ಟೋಬರ್ 1ರವರೆಗೆ ನಡೆಯಲಿದೆ.
Related Articles
Advertisement
ಕಾಂಗ್ರೆಸ್ ಸದನ ತಂತ್ರ: ಸರಕಾರ ಪ್ರಕಟಿಸುವ ಅಧ್ಯಾದೇಶ ಚರ್ಚೆಗೆ ಹಾಗೂ ಆಡಳಿತ ವೈಫಲ್ಯಗಳನ್ನು ಪ್ರಶ್ನಿಸಲು ಪ್ರಮುಖ ವಿಪಕ್ಷ ಕಾಂಗ್ರೆಸ್ ಹಿರಿಯ ನಾಯಕರನ್ನು ಮುಂದೆ ಬಿಟ್ಟಿದೆ. ಪಿ. ಚಿದಂಬರಂ, ದಿಗ್ವಿಜಯ ಸಿಂಗ್, ಜೈರಾಮ್ ರಮೇಶ್, ಅಮರ್ ಸಿಂಗ್, ಗೌರವ್ ಗೊಗೊಯ್ ಅವರನ್ನೊಳಗೊಂಡ 5 ಸದಸ್ಯರ ಸಮಿತಿಯನ್ನು ಕಾಂಗ್ರೆಸ್ ರಚಿಸಿದೆ.
ಲಡಾಖ್ ಗಡಿ ಬಿಕ್ಕಟ್ಟು, ವಲಸೆ ಕಾರ್ಮಿಕರ ಸಮಸ್ಯೆ, ಕೋವಿಡ್ 19 ಆರ್ಥಿಕ ಬಿಕ್ಕಟ್ಟು ನಿರ್ವಹಣೆ ಕುರಿತು ಪ್ರಶ್ನೆಗಳ ದಾಳಿ ನಡೆಸಲು ಕಾಂಗ್ರೆಸ್ ತಂತ್ರ ಹೆಣೆದಿದೆ. ಕೋವಿಡ್ 19 ಪ್ರೊಟೋಕಾಲ್ ಅನ್ವಯ ಉಭಯ ಸದನಗಳ ಕಲಾಪಗಳು ನಡೆಯಲಿವೆ.
ಮುಂಗಾರು ಅಧಿವೇಶನ ಆರಂಭವಾಗುವ 72 ಗಂಟೆಗಳ ಮುಂಚೆ ಎಲ್ಲ ಸಂಸದರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಮತ್ತು ಸಿಬಂದಿ ಕೋವಿಡ್ 19 ಪರೀಕ್ಷೆ ಮಾಡಿಸಿಕೊಳ್ಳಬೇಕು.– ಓಂ ಬಿರ್ಲಾ, ಲೋಕಸಭೆ ಸ್ಪೀಕರ್