ನವದೆಹಲಿ: ರಕ್ಷಣಾ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಭಾರತ ಮತ್ತು ಚೀನಾ ಸೇನೆ ಸಂಘರ್ಷಕ್ಕೆ ಕಾರಣವಾಗಿದ್ದ ಪೂರ್ವ ಲಡಾಖ್ ನ ಗಾಲ್ವಾನ್ ಮತ್ತು ಪ್ಯಾಂಗಾಂಗ್ ಸರೋವರ ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಶೀಘ್ರದಲ್ಲೆ ‘ಡಾರ್ಕ್ ಮೋಡ್ ಸರ್ಚಿಂಗ್’ ವೈಶಿಷ್ಟ್ಯ ತರಲಿದೆ ಗೂಗಲ್..!
ಏತನ್ಮಧ್ಯೆ ವಾಸ್ತವ ಗಡಿನಿಯಂತ್ರಣ ರೇಖೆ ಸಮೀಪದ ಪ್ರದೇಶಗಳಿಗೆ ತೆರಳಲು ಸರ್ಕಾರದ ಸಮಿತಿ ಸರ್ಕಾರದ ಅನುಮತಿ ಕೇಳುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ.
ಬಿಜೆಪಿ ಮುಖಂಡ, ಕೇಂದ್ರ ಮಾಜಿ ಸಚಿವ ಜುಆಲ್ ಓರಾಮ್ ಅಧ್ಯಕ್ಷತೆಯ 30 ಸದಸ್ಯರ ಸಮಿತಿಯಲ್ಲಿ ಕಾಂಗ್ರೆಸ್ ನ ರಾಹುಲ್ ಗಾಂಧಿ ಕೂಡಾ ಸದಸ್ಯರಾಗಿದ್ದು, ಈ ತಂಡ ಮೇ ಕೊನೆಯ ವಾರ ಅಥವಾ ಜೂನ್ ನಲ್ಲಿ ಪೂರ್ವ ಲಡಾಖ್ ಪ್ರದೇಶಕ್ಕೆ ಭೇಟಿ ನೀಡುವ ಇಚ್ಛೆ ಹೊಂದಿರುವುದಾಗಿ ಮೂಲಗಳು ಪಿಟಿಐಗೆ ತಿಳಿಸಿವೆ.
ಸಮಿತಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪೂರ್ವ ಲಡಾಖ್ ಪ್ರದೇಶಕ್ಕೆ ತೆರಳುವ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದು, ರಾಹುಲ್ ಗಾಂಧಿ ಗೈರುಹಾಜರಾಗಲಿದ್ದಾರೆ ಎಂದು ಹೇಳಿದೆ. ವಾಸ್ತವ ಗಡಿನಿಯಂತ್ರಣ ರೇಖೆ ಪ್ರದೇಶಕ್ಕೆ ಸಮಿತಿ ಭೇಟಿ ನೀಡಲು ಸರ್ಕಾರದ ಅನುಮತಿಯ ಅಗತ್ಯವಿದೆ ಎಂದು ವಿವರಿಸಿದೆ.
ಪೂರ್ವ ಲಡಾಖ್ ನ ಪ್ಯಾಂಗಾಂಗ್ ಸರೋವರ ಪ್ರದೇಶದಿಂದ ಉಭಯ ದೇಶಗಳ ಸೇನೆಯನ್ನು ಹಿಂಪಡೆಯುವ ಬಗ್ಗೆ ಲೋಕಸಭೆಯಲ್ಲಿ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದರು.