Advertisement

Parliment Session: ಲೋಕಸಭೆ ಕಲಾಪದಲ್ಲೂ ವಾಲ್ಮೀಕಿ ನಿಗಮ ಹಗರಣದ ಸದ್ದು

09:51 PM Jul 22, 2024 | Team Udayavani |

ಶಿರಸಿ: ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣ ಸಂಸತ್‌ನಲ್ಲೂ ಪ್ರತಿಧ್ವನಿಸಿದೆ.

Advertisement

ಲೋಕಸಭೆ ಕಲಾಪದಲ್ಲಿ ಸೋಮವಾರ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಗರಣದ ಬಗ್ಗೆ ಪ್ರಸ್ತಾಪಿಸಿ ದೇಶದ ಗಮನ ಸೆಳೆಯುವ ಯತ್ನ ಮಾಡಿದರು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಕರ್ನಾಟಕದಲ್ಲಿ ಅಭಿವೃದ್ಧಿ ನಿರ್ಲಕ್ಷ್ಯ  ಜತೆಗೆ ಪರಿಶಿಷ್ಟರ ಕಲ್ಯಾಣ ಇಲಾಖೆಯ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ಆಗಿದೆ. ನಿಗಮದ ಖಜಾನೆಯ ಮೂಲಕವೇ ಈ ಹಣ ಬೇನಾಮಿ ಖಾತೆಗಳಿಗೆ ಜಮಾ ಆಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳೇ ಸ್ವತಃ ಹಣಕಾಸು ಇಲಾಖೆ ನೋಡಿಕೊಳ್ಳುತ್ತಿದ್ದಾರೆ. ಹಾಗಾಗಿ ಆಡಳಿತ ವ್ಯವಸ್ಥೆ ದುರುಪಯೋಗ ಆಗಿದೆ. ಟ್ರಸರಿ ಮೂಲಕವೇ ಹಣ ವರ್ಗಾವಣೆ ಆಗಿರುವುದನ್ನು ಸರ್ಕಾರವೇ ಒಪ್ಪಿಕೊಂಡಿದೆ. ಸಿಎಂ ಸ್ವತಃ ಹಣಕಾಸು ಸಚಿವರಾಗಿರುವ ಹಾಗೂ ಬ್ಯಾಂಕ್‌ಗಳ ಮೂಲಕವೇ ಹಣ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next