ನವದೆಹಲಿ : 2021-22ರ ಸಾಲಿನ ಕೇಂದ್ರ ಬಜೆಟನ್ನು ಫೆಬ್ರವರಿ 1 ರಂದು ನಡೆಸಲು ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ.
ಅದೇ ರೀತಿ ಸಂಸತ್ತಿನ ಬಜೆಟ್ ಅಧಿವೇಶನವನ್ನು ಎರಡು ಭಾಗಗಳಲ್ಲಿ ನಡೆಸಲು ತೀರ್ಮಾನಿಸಿದ್ದು. ಅಧಿವೇಶನದ ಮೊದಲ ಹಂತವು ಜನವರಿ 29 ರಂದು ಅಧ್ಯಕ್ಷ ಕೋವಿಂದ್ ಅವರ ಭಾಷಣದೊಂದಿಗೆ ಪ್ರಾರಂಭವಾಗಿ ಫೆಬ್ರವರಿ 15 ರಂದು ಕೊನೆಗೊಳ್ಳಲಿದೆ. ಎರಡನೇ ಹಂತವು ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ನಡೆಸಬೇಕೆಂದು ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ.
ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರು ಜನವರಿ 29 ರಂದು ಲೋಕಸಭೆ ಮತ್ತು ರಾಜ್ಯಸಭೆ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕೇಂದ್ರವು ಕಳೆದ ತಿಂಗಳು ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಿತ್ತು.
ಅಧಿವೇಶನದಲ್ಲಿ ಕೋವಿಡ್ ಸಂಬಂಧಿತ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಉಭಯ ಸದನಗಳಲ್ಲಿ ತಲಾ 4 ಗಂಟೆಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.