Advertisement

Parliament Winter Session: ಡಿ.4 ರಿಂದ 22 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ…

12:33 PM Nov 27, 2023 | sudhir |

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ದಿನ ನಿಗದಿಯಾಗಿದ್ದು ಅದರಂತೆ ಡಿಸೆಂಬರ್ 4 ರಿಂದ 22 ರವೆರೆಗೆ ಅಧಿವೇಶನ ನಡೆಯಲಿದೆ ಎಂದು ಹೇಳಲಾಗಿದೆ.

Advertisement

ಡಿಸೆಂಬರ್ 3 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಮರುದಿನವೇ ಅಧಿವೇಶನ ಪ್ರಾರಂಭವಾಗಲಿವೆ ಎಂದು ತಿಳಿಸಲಾಗಿದೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.

ಈ ಸಭೆಗಳಲ್ಲಿ ಹಲವು ಮಹತ್ವದ ಮಸೂದೆಗಳು ಸದನದ ಮುಂದೆ ಬರುವ ಸಾಧ್ಯತೆ ಇದೆ. ವಾಸ್ತವವಾಗಿ ಡಿಸೆಂಬರ್ 3 ರಂದು ಸಂಸತ್ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಸರ್ವಪಕ್ಷಗಳ ಸಭೆ ನಡೆಯಬೇಕಿತ್ತು ಆದರೆ 5 ರಾಜ್ಯಗಳ ಚುನಾವಣಾ ಫಲಿತಾಂಶಗಳು ಒಂದೇ ದಿನದಲ್ಲಿ ಪ್ರಕಟವಾಗುವುದರಿಂದ ಡಿಸೆಂಬರ್ 2 ರಂದು ಸಭೆ ನಡೆಯಲಿದೆ.

ಪ್ರಮುಖ ವಿಧೇಯಕಗಳನ್ನು ಅಂಗೀಕರಿಸಲು ಮುಂದಾಗಿರುವ ಎನ್ ಡಿಎ ಸರ್ಕಾರದ ಮೇಲೆ 5 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಭಾವ ಬೀರಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಗೃಹ ಸ್ಥಾಯಿ ಸಮಿತಿಯು ಈಗಾಗಲೇ ಮೂರು ವರದಿಗಳನ್ನು ಅನುಮೋದಿಸಿರುವುದರಿಂದ, ಐಪಿಸಿ, ಸಿಆರ್‌ಪಿಸಿ ಮತ್ತು ಎವಿಡೆನ್ಸ್ ಆಕ್ಟ್ ಬದಲಿಗೆ ಮೂರು ಪ್ರಮುಖ ಮಸೂದೆಗಳನ್ನು ಈ ಅಧಿವೇಶನದಲ್ಲಿ ಪರಿಚಯಿಸಬಹುದು ಎನ್ನಲಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ ಮತ್ತೊಂದು ಪ್ರಮುಖ ಮಸೂದೆ ಸಂಸತ್ತಿನಲ್ಲಿ ಬಾಕಿ ಉಳಿದಿದೆ. ಮುಂಗಾರು ಅಧಿವೇಶನದ ವೇಳೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಸೂದೆ ಅಂಗೀಕಾರವಾಗಲಿಲ್ಲ.

Advertisement

ಇದನ್ನೂ ಓದಿ: Shimoga; ಬರ ಪರಿಹಾರ ಹಣ ತರುವ ತಾಕತ್ತು, ಧಮ್ ಬಿಜೆಪಿಯವರಿಗಿದೆಯೇ?: ಮಧು ಬಂಗಾರಪ್ಪ

Advertisement

Udayavani is now on Telegram. Click here to join our channel and stay updated with the latest news.

Next