Advertisement

15 ದಿನದಲ್ಲಿ ನಿಗಮ, ಮಂಡಳಿ ನೇಮಕಕ್ಕೆ ಸಂಸದರ ಮನವಿ

06:20 AM Jun 11, 2018 | Team Udayavani |

ಬೆಂಗಳೂರು: ನಿಗಮ-ಮಂಡಳಿ ಅಧ್ಯಕ್ಷರು,ನಿರ್ದೇಶಕರನ್ನು 10ರಿಂದ 15 ದಿನದಲ್ಲಿ ನೇಮಕ ಮಾಡಿ ಶಾಸಕರಿಗೆ ಆದ್ಯತೆ ನೀಡಬೇಕೆಂದು ಸಂಸದರು ಅಭಿಪ್ರಾಯಪಟ್ಟಿದ್ದು, ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

Advertisement

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಕಾಂಗ್ರೆಸ್‌ನ ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರೊಂದಿಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಪಾಲಿನ ಆರು ಸಚಿವ ಸ್ಥಾನಗಳನ್ನು ಶೀಘ್ರವಾಗಿ ಹಂಚಿಕೆ ಮಾಡಬೇಕು. ಜತೆಗೆ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳೆರಡು ನಿಗಮ, ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರ ನೇಮಕ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸಂಸದರು ಸಲಹೆ ನೀಡಿದ್ದಾರೆ ಎಂದು ಹೇಳಿದರು.

ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷದ ಸಿದಟಛಿತೆ ಹೇಗಿರಬೇಕು. ಲೋಕಸಭಾ ಕ್ಷೇತ್ರಗಳಲ್ಲಿ ಈವರೆಗೆ ನಡೆದಿರುವ ಕೆಲಸ ಕಾರ್ಯಗಳು ಹಾಗೂ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ಕ್ಷೇತ್ರಗಳಲ್ಲಿ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಂಸದರೊಂದಿಗೆ ಚರ್ಚಿಸಲಾಗಿದೆ. ಕೆಲವರು ಸಮಸ್ಯೆಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಸಂಸದರ
ಅನುದಾನ ಸಮರ್ಪಕ ಬಳಕೆ ಬಗ್ಗೆ ಪರಿಶೀಲನೆ ಜತೆಗೆ ಮುಂದೆ ಆಗಬೇಕಿರುವ ಕಾರ್ಯಗಳ ಬಗ್ಗೆಯೂ ಚರ್ಚೆ ನಡೆಯಿತು ಎಂದು ತಿಳಿಸಿದರು.

ನಾಲ್ಕು ಸಂಸದರು ಗೈರು: ಸಭೆಯಲ್ಲಿ 11 ಮಂದಿ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು ಪಾಲ್ಗೊಂಡಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮುದ್ದಹನುಮೇಗೌಡ, ಬಿ.ಎನ್‌.ಚಂದ್ರಪ್ಪ, ಧ್ರುವನಾರಾಯಣ ಅವರು ಲೋಕಸಭಾ ಸಮಿತಿ ಪ್ರವಾಸದಲ್ಲಿರುವ ಕಾರಣ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ ಎಂದು ಪರಮೇಶ್ವರ್‌ ಸ್ಪಷ್ಟಪಡಿಸಿದರು.

ಲೋಕಸಭೆ ಸ್ಥಾನ ಹಂಚಿಕೆ ಚರ್ಚೆ ನಡೆಸಿಲ್ಲ: ಮೈತ್ರಿಯಡಿ ಲೋಕಸಭಾ ಚುನಾವಣೆಗೆ ಕ್ಷೇತ್ರ ಹಂಚಿಕೆ ಬಗ್ಗೆ ಈವರೆಗೆ ಚರ್ಚಿಸಿಲ್ಲ. ಈ ಬಗ್ಗೆ ಮುಂದೆ ಚರ್ಚಿಸಲಾಗುವುದು. ಹೈಕಮಾಂಡ್‌ ಕೂಡ ಅದರಲ್ಲಿ ಪಾಲ್ಗೊಂಡು ಚರ್ಚಿಸಿ ನಂತರ ತೀರ್ಮಾನ ಕೈಗೊಳ್ಳುತ್ತದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ಗೆ ಎಷ್ಟು ಸ್ಥಾನ, ಜೆಡಿಎಸ್‌ಗೆ ಎಷ್ಟು ಸ್ಥಾನ
ಬಿಟ್ಟುಕೊಡಬೇಕು ಎಂಬುದನ್ನು ಚರ್ಚಿಸಿ ಹೈಕಮಾಂಡ್‌ಗೆ ತಿಳಿಸಲಾಗುವುದು. ನಂತರ ಹೈಕಮಾಂಡ್‌ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

Advertisement

ಹಿರಿಯ ಮುಖಂಡರಾದ ಶಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್‌ನಿಂದ ಹೊರ ಹಾಕಬೇಕು ಎಂಬುದಾಗಿ ಎಸ್‌.ಎಂ.ಜಾಮದಾರ್‌ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ನನಗೆ ತಿಳಿದಂತೆ ಜಾಮದಾರ್‌ ಅವರಿಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಸಂಸದರಾದ ಕೆ.ಎಚ್‌.ಮುನಿಯಪ್ಪ, ಪ್ರಕಾಶ್‌ ಹುಕ್ಕೇರಿ, ಡಿ.ಕೆ.ಸುರೇಶ್‌, ಬಿ.ವಿ.ನಾಯಕ್‌, ನಾಸಿರ್‌ ಹುಸೇನ್‌, ಡಾ.ಎಲ್‌.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್‌ ಇತರರು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next