Advertisement

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

08:53 PM Nov 24, 2024 | Team Udayavani |

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಹುದ್ದೆಗಳಿಗೆ ಲ್ಯಾಟರಲ್‌ ಎಂಟ್ರಿ ಮೂಲಕ ನೇಮಕ ಮಾಡುವ ವಿಷಯವನ್ನು ಸಂಸದೀಯ ಸ್ಥಾಯಿ ಸಮಿತಿ ಪರಿಶೀಲನೆ ನಡೆಸಲಿದೆ.

Advertisement

ಲ್ಯಾಟರಲ್‌ ಎಂಟ್ರಿ ಮೂಲಕ ನೇಮಕದಲ್ಲಿ ಮೀಸಲಿಗೆ ಅವಕಾಶ ಇಲ್ಲ ಎಂಬ ಕಾರಣಕ್ಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಲೋಕಸಭೆ ಸಚಿವಾಲಯ ಮಾಹಿತಿಯ ಪ್ರಕಾರ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಮತ್ತು ನ್ಯಾಯಕ್ಕೆ ಸಂಬಂಧಿಸಿದಂತೆ ಸಂಸದೀಯ ಸ್ಥಾಯಿ ಸಮಿತಿ ಆಯ್ಕೆ ಮಾಡಿದ ವಿಷಯಗಳಲ್ಲಿ ಲ್ಯಾಟರಿ ಎಂಟ್ರಿ ವಿಷಯವೂ ಸೇರಿದೆ.

ಕಳೆದ ಆಗಸ್ಟ್‌ನಲ್ಲಿ ಪ್ರಮುಖ 45 ಹುದ್ದೆಗಳಿಗೆ ಲ್ಯಾಟರಲ್‌ ಎಂಟ್ರಿ ಮೂಲಕ ನೇಮಕಾತಿ ಕುರಿತು ಯುಪಿಎಸ್‌ಸಿ ಜಾಹೀರಾತು ನೀಡಿತ್ತು. ಬಳಿಕ ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಲ್ಯಾಟರಲ್‌ ಎಂಟ್ರಿ ನೇಮಕಾತಿಗೆ ಕೇಂದ್ರ ಸರ್ಕಾರ ತಡೆಯೊಡ್ಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next