Advertisement
ಚಳಿಗಾಲದ ಅಧಿವೇಶನವು ನ. 18ರಿಂದ ಡಿ.13ರ ವರೆಗೆ ನಡೆಯಲಿದೆ. ಮಸೂದೆಯನ್ನು ಅಧಿವೇಶನದ ಅಜೆಂಡಾವಾಗಿ ಸರಕಾರ ಪಟ್ಟಿ ಮಾಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಹಿಂದಿನ ಅವಧಿಯಲ್ಲೇ ಈ ಮಸೂದೆಗೆ ಅಂಗೀಕಾರ ಪಡೆಯಲು ಪ್ರಯತ್ನಿಸಿತ್ತಾದರೂ ವಿಪಕ್ಷಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಅದು ವಿಫಲವಾಗಿತ್ತು. ಈ ಮಸೂದೆಯು ಧಾರ್ಮಿಕ ತಾರತಮ್ಯದಿಂದ ಕೂಡಿದೆ ಎಂದು ಆರೋಪಿಸಿದ್ದ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.
ಚಳಿಗಾಲದ ಅಧಿವೇಶನ ಆರಂಭದ ಹಿನ್ನೆಲೆಯಲ್ಲಿ ಶನಿವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು. ಸುಗಮ ಕಲಾಪಕ್ಕೆ ಎಲ್ಲ ಪಕ್ಷಗಳೂ ಸಹಕಾರ ನೀಡಬೇಕು ಎಂದು ಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ. ಎಲ್ಲ ಪಕ್ಷಗಳೂ ಸಾರ್ವ ಜನಿಕರ ಹಿತಾಸಕ್ತಿಯಿರುವ ವಿಚಾರಗಳ ಕುರಿತು ಚರ್ಚೆ ನಡೆಸಲಿ ಎಂದು ಸಲಹೆ ನೀಡಿದ್ದಾರೆ. ಸಭೆಯಲ್ಲಿ ಮೋದಿ ಅವರೂ ಭಾಗಿಯಾಗಿದ್ದರು. ಏನಿದೆ ಮಸೂದೆಯಲ್ಲಿ ?
ಈ ಮಸೂದೆಯ ಪ್ರಕಾರ ಧಾರ್ಮಿಕ ಕಿರುಕುಳ ತಾಳಲಾರದೇ ಬಾಂಗ್ಲಾದೇಶ, ಪಾಕಿಸ್ಥಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದಿರುವಂಥ ಮುಸ್ಲಿಮೇತರರಿಗೆ ಅಂದರೆ, ಹಿಂದೂಗಳು, ಜೈನರು, ಕ್ರೈಸ್ತರು, ಸಿಕ್ಖರು, ಬೌದ್ಧ ಧರ್ಮೀಯರು ಮತ್ತು ಪಾರ್ಸಿಗಳಿಗೆ ಭಾರತದ ಪೌರತ್ವವನ್ನು ಒದಗಿಸಲಾಗುತ್ತದೆ.